ಶಿವಮೊಗ್ಗ : 2021-2022 ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ( Primary School Teacher Recruitment ) ಕುರಿತು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ ಶಿಕ್ಷಣ ಇಲಾಖಾ ( Education Department ) ವೆಬ್‍ಸೈಟ್‍ನಲ್ಲಿ 1:2 ಅನುಪಾತದ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಲಾಗಿದ್ದು ಅದರನ್ವಯ 816 ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ತಂಡಗಳನ್ನು ರಚಿಸಿ ಅ.06ರಿಂದ 14 ರವರೆಗೆ ಅಭ್ಯರ್ಥಿಗಳು ತಮಗೆ ನಿಗದಿಪಡಿಸಿದ ದಿನಾಂಕಗಳಂದು ದಾಖಲೆಗಳ ಪರಿಶೀಲನೆಗೆ ( Documents Verification ) ಹಾಜರಾಗಲು ತಿಳಿಸಿದೆ.

BREAKING NEWS : ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಆರೋಪ : ಜೆಡಿಎಸ್ ನ ಇಬ್ಬರು ಶಾಸಕರಿಗೆ ನೋಟಿಸ್ ಜಾರಿ

ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು( ಆಡಳಿತ) ಮಾಹಿತಿ ಬಿಡುಗಡೆ ಮಾಡಿದ್ದು, ಕಸ್ತೂರ್ಬಾ ಪದವಿಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗ-ಶಿವಮೊಗ್ಗ ಇಲ್ಲಿ ಒಂದು ದಿನಕ್ಕೆ 20 ಅಭ್ಯರ್ಥಿಗಳಂತೆ ದಾಖಲೆ ಪರಿಶೀಲನೆ ನಡೆಸಲಾಗುವುದು. ಒಟ್ಟು 6 ತಂಡಗಳ ರಚನೆಯಾಗಿದ್ದು ನಿಗದಿಪಡಿಸಿದ ದಿನಾಂಕಗಳಂದು ಅಭ್ಯರ್ಥಿಗಳು ತಮ್ಮ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕೆಂದು ಎಂದು ತಿಳಿಸಿದ್ದಾರೆ.

ಈಗ ಅಚ್ಛೇದಿನದ ಅಸಲಿಯೆತ್ತಿನ ಬಗ್ಗೆ ದೊಡ್ಡ ಪ್ರಶ್ನೆಯೇ ಮೂಡಿದೆ – HD ಕುಮಾರಸ್ವಾಮಿ

Share.
Exit mobile version