ಶಿವಮೊಗ್ಗ : ಕೆಲವರು ಯಾವುದೋ ಒಂದು ಕಾರಣಕ್ಕೆ ಅಥವಾ ಯಾವುದೋ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಜೀವನದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನೋಡಿದ್ದೇವೆ ಆದರೆ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯೊಬ್ಬರು ಹೊಟ್ಟೆ ನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ವಿದ್ಯುತ್ ನಗರದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.
ಹೌದು ಆತ್ಮಹತ್ಯೆ ಮಾಡಿಕೊಂಡ ಅಕ್ಷತಾ ಅವರಿಗೆ ಅನಾರೋಗ್ಯ ಕಾಡುತ್ತಿತ್ತು. ಹಾಗಾಗಿ ಇಂದು ಅಕ್ಷತಾ ಅವರು ಸೊರಬ ಪಟ್ಟಣದ ವಿದ್ಯುತ್ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ದಿನಗಳಿಂದ ಅಕ್ಷತಾ ಅನಾರೋಗ್ಯದಿಂದ ಬಳಲುತ್ತಿದ್ದರು. ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಮೃತ ಅಕ್ಷತಾ ಅವರು ಭದ್ರಾವತಿ ತಾಲೂಕಿನ ಕೆರೆಬೀರನಹಳ್ಳಿ ಗ್ರಾಮದವರು ಎಂದು ಹೇಳಲಾಗುತ್ತಿದೆ. ಕೆಲ ವರ್ಷಗಳ ಹಿಂದೆ ಚಂದ್ರಗುತ್ತಿ ಗ್ರಾಮದ ಸಂತೋಷ್ ಜೊತೆ ಅಕ್ಷತಾ ಅವರ ಮದುವೆ ಆಗಿತ್ತು ಎಂದು ತಿಳಿದುಬಂದಿದೆ. ಹೊಟ್ಟೆನೋವು ತಾಳಲಾರದೆ ಸೊರಬ ಪಟ್ಟಣದ ವಿದ್ಯುತ್ ನಗರದ ಮನೆಯಲ್ಲಿ ಅಕ್ಷತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಕುರಿತಂತೆ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.