ಶಿವಮೊಗ್ಗ : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ವತಿಯಿಂದ 2022-23 ನೇ ಸಾಲಿನಲ್ಲಿ ಉದ್ಯಮಶೀಲತಾಭಿವೃದ್ದಿ ಯೋಜನೆ(ದ್ವಿಚಕ್ರ/ತ್ರಿಚಕ್ರ ಸರಕು ಸಾಗಾಣೆಕೆ ವಾಹನ) ಹಾಗೂ ಮೈಕ್ರೋ ಕ್ರೆಡಿಟ್(ಪ್ರೇರಣಾ) ಯೋಜನೆಯಡಿ ಆನ್ಲೈನ್ ಮೂಲಕ ಕರೆಯಲಾಗಿದ್ದ ಅರ್ಜಿ ಅವಧಿಯನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.
BREAKING NEWS: ಗಂಗಾ ಕಲ್ಯಾಣ ಯೋಜನೆ ಟೆಂಡರ್ ಬಗ್ಗೆ ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ
ಆಸಕ್ತ ಅರ್ಹ ಫಲಾಪೇಕ್ಷಿಗಳು, ಗ್ರಾಮ ಒನ್, ಶಿವಮೊಗ್ಗ ಒನ್, ಸೇವಾಸಿಂಧು ಪೋರ್ಟಲ್ https://sevasindhu.karnataka.gov.in, www.adcl.karnataka.gov.in ಇಲ್ಲಿ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ರಂಗನಾಥ ನಿಲಯ, ಗಾಂಧಿನಗರ, 6ನೇ ತಿರುವು, ‘ಎ’ ಬ್ಲಾಕ್, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮದ ವತಿಯಿಂದ 2022-23 ನೇ ಸಾಲಿನಲ್ಲಿ ಉದ್ಯಮಶೀಲತಾಭಿವೃದ್ದಿ ಯೋಜನೆ(ದ್ವಿಚಕ್ರ/ತ್ರಿಚಕ್ರ ಸರಕು ಸಾಗಾಣೆಕೆ ವಾಹನ) ಯೋಜನೆಯಡಿ ಆನ್ಲೈನ್ ಮೂಲಕ ಕರೆಯಲಾಗಿದ್ದ ಅರ್ಜಿ ಅವಧಿಯನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.
ಆಸಕ್ತ ಅರ್ಹ ಫಲಾಪೇಕ್ಷಿಗಳು, ಗ್ರಾಮ ಒನ್, ಶಿವಮೊಗ್ಗ ಒನ್, ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಇಲ್ಲಿ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ರಂಗನಾಥ ನಿಲಯ, ಗಾಂಧಿನಗರ, 6ನೇ ತಿರುವು, ‘ಎ’ ಬ್ಲಾಕ್, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
2022-23 ನೇ ಸಾಲಿನಲ್ಲಿ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ರಾಜಶ್ರೀ ಶಾಹುಮಹಾರಾಜ ವಿದೇಶ ವ್ಯಾಸಂಗ ಯೋಜನೆಗಳ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಮರಾಠ ಸಮುದಾಯಗಳ ಅರ್ಹ ಫಲಾಪೇಕ್ಷಿಗಳಿಂದ ಸುವಿಧ http://suvidha.karnataka.gov.in ಪೋರ್ಟಲ್ನ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿ.31 ರವರೆಗೆ ವಿಸ್ತರಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-229634 ನ್ನು ಸಂಪರ್ಕಿಸುವುದು.
BIGG NEWS: ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಆರೋಪ; ಎಸ್ ಕೆ ಬಸವರಾಜನ್ ಗೆ ಹೈಕೋರ್ಟ್ ಜಾಮೀನು