ಶಿವಮೊಗ್ಗ : 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
BREAKING NEWS: ನಟ ದಿಗಂತ್ ಆರೋಗ್ಯವಾಗಿದ್ದಾರೆ, ಇಂದು ಅಥವಾ ನಾಳೆ ಡಿಸ್ಚಾರ್ ಆಗಲಿದ್ದಾರೆ – ಪತ್ನಿ ಐಂದ್ರಿತಾ ರೇ
ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿ:30/06/2022 ಕಡೆಯ ದಿನವಾಗಿದೆ. ಪ್ರವರ್ಗ-1, ಎಸ್ಸಿ ಮತ್ತು ಎಸ್ಟಿ ಆದಾಯ ಮಿತಿ ರೂ.1.00 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ಆದಾಯ ಮಿತಿ ರೂ.44,500 ಗಳು ಇರುತ್ತದೆ.
UPC ಪರೀಕ್ಷೆಯಲ್ಲಿ ಸಾರಿಗೆ ಬಸ್ ಚಾಲಕರ ಪುತ್ರನಿಗೆ 569ನೇ ಸ್ಥಾನ: KSRTCಯಿಂದ ತಂದೆ-ತಾಯಿಗೆ ಆತ್ಮೀಯ ಸನ್ಮಾನ
ಅರ್ಜಿ ಸಲ್ಲಿಸಲು ಹಾಗೂ ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್www.bcwd.karnataka.gov.in ನ್ನು ವೀಕ್ಷಿಸಬೇಕು. ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಹಾಗೂ ಸಹಾಯವಾಣಿ ಸಂಖ್ಯೆ 080-65970006/08182-222129 ಗಳನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.
ಒಂದು ಮಳಿಗೆಯಲ್ಲಿ ಒಂದು ಸಾವಿರ ಜನರಿಗೆ ಉದ್ಯೋಗಾವಕಾಶ ದೊರೆತಿದೆ – ಸಿಎಂ ಬೊಮ್ಮಾಯಿ