ಶಿವಮೊಗ್ಗ : ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ ಸಂಸ್ಥೆಯಲ್ಲಿ 2022-23 ನೇ ಸಾಲಿಗೆ 02 ವರ್ಷಗಳ ಐಟಿಐ/ದ್ವಿತೀಯ ಪಿಯುಸಿ (ವಿಜ್ಞಾನ)/ದ್ವಿತೀಯ ಪಿಯುಸಿ (ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರಿ ಪಾಲಿಟೆಕ್ನಿಕ್‍ಗಳಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸುಗಳಿಗೆ ಸೀಟು ಹಂಚಿಕೆ ಮಾಡಲು ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಐಟಿಐ/ದ್ವಿತೀಯ ಪಿಯುಸಿ(ವಿಜ್ಞಾನ)/ದ್ವಿತೀಯ ಪಿಯುಸಿ(ತಾಂತ್ರಿಕ ವಿಷಯಗಳಲ್ಲಿ) ವಿದ್ಯಾರ್ಹತೆ ಹೊಂದಿರುವವರಿಗೆ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಕೋರ್ಸು ಲಭ್ಯವಿದೆ.

ಷೇರುಪೇಟೆ ಸುದ್ದಿ: ನಿಫ್ಟಿ, ಸೆನ್ಸೆಕ್ಸ್ ಲಾಭ, ಆದರೆ ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯ ನಷ್ಟದೊಂದಿಗೆ ವಾರವನ್ನು ಕೊನೆ | Sensex

ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಆಗಸ್ಟ್ 30 ಕಡೆಯ ದಿನವಾಗಿದೆ. ಐಟಿಐ/ದ್ವಿತೀಯ ಪಿಯುಸಿ(ವಿಜ್ಞಾನ)/ದ್ವಿತೀಯ ಪಿಯುಸಿ (ತಾಂತ್ರಿಕ ವಿಷಯಗಳಲ್ಲಿ), ವರ್ಗಾವಣೆ ಪ್ರಮಾಣ ಪತ್ರ/ಎನ್‍ಓಸಿ, 05 ವರ್ಷದ ವ್ಯಾಸಂಗ ಪ್ರಮಾಣ ಪತ್ರ ಕ್ಷೇತ್ರ ಶಿಕ್ಷಣಾಧಿಕಾರಿಗಳ ದೃಢೀಕರಿಸಿದ ಸಹಿಯೊಂದಿಗೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, 04 ಭಾವಚಿತ್ರಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ರವಿನಾಯ್ಕ ಡಿ. ಪ್ರಾಂಶುಪಾಲರು, ಮೊ.ಸಂ: 9886610245, ರುದ್ರೇಶ್ ಡಿ.ಎನ್, ಪ್ರವೇಶ ಸಂಪರ್ಕಾಧಿಕಾರಿ 9686396494, 795155925, 08182-295365 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ಸರ್ಕಾರಿ ವಸತಿ ಮಹಿಳಾ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರು ತಿಳಿಸಿದ್ದಾರೆ.

BIGG NEWS : ಹೆಸ್ಕಾಂ ಗ್ರಾಹಕರೇ ಗಮನಿಸಿ : ಸೈಬರ್ ವಂಚಕರ ನಕಲಿ ಸಂದೇಶಗಳಿಂದ ಜಾಗೃತರಾಗಲು ಹೆಸ್ಕಾಂ ಮನವಿ

Share.
Exit mobile version