ಶಿವಮೊಗ್ಗ: ಸಾಗರ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2022-23 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗಾಗಿ ಭಾರತ ಸರ್ಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Viral News : ಮೂವರು ವ್ಯಕ್ತಿಗಳಿಂದ ನಾಯಿಯನ್ನು ನೇಣು ಬಿಗಿದು ಸಾಯಿಸಿದ ‘ಹೃದಯ ವಿದ್ರಾವಕ video’ | WATCH
ಈ ಯೋಜನೆಯಡಿ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸುವಂತಿಲ್ಲ. ಹಾಗೂ ಈ ಹಿಂದೆ ಅರ್ಜಿ ಸಲ್ಲಿಸದಿರುವ ಮತ್ತು 2022-23 ನೇ ಸಾಲಿನ ನವೀನ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್ಸೈಟ್ www.sw.kar.nic.in ಮತ್ತು http://ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸುವಂತೆ ಸಾಗರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗೆ ಸಾಗರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ದೂ.ಸಂ: 08183-229402/ 9480843192 ಗಳನ್ನು ಸಂಪರ್ಕಿಸುವುದು.