ಶಿವಮೊಗ್ಗ : ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರು 16 ರಿಂದ24 ವರ್ಷವಯೋಮಾನದ ಒಳಗಿರುವ ಅಭ್ಯರ್ಥಿಗಳಿಗೆ 2022-23ನೇ ಸಾಲಿನಲ್ಲಿ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
BIG NEWS: ಯೋಜನೆಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಂಡಾಗ, ಅದು ದೇಶದ ತೆರಿಗೆದಾರರಿಗೆ ನೀಡುವ ಗೌರವ – ಪ್ರಧಾನಿ ಮೋದಿ
ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.10,000/- ಶಿಷ್ಯವೇತನವಾಗಿ ನೀಡಲಾಗುವುದು. ಒಬ್ಬ ಅಭ್ಯರ್ಥಿ ಒಮ್ಮೆ ಮಾತ್ರ ಶಿಷ್ಯವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಅರ್ಜಿಗಳನ್ನು ಅಕಾಡೆಮಿಯಲ್ಲಿ ಉಚಿತವಾಗಿ ಪಡೆಯಬಹುದು. ಅಕಾಡೆಮಿ ವೆಬ್‍ಸೈಟ್ https://sangeetanrityaacademy.karnataka.gov.in ಮೂಲಕ ಅಥವಾ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಹೆಸರಿನ ಫೇಸ್‍ಬುಕ್ ಪುಟದಲ್ಲೂ ಅರ್ಜಿಗಳನ್ನು ಪಡೆಯಬಹುದಾಗಿದೆ. ಬೇರೆ ಬೇರೆ ಜಿಲ್ಲೆಯ ಅಭ್ಯರ್ಥಿಗಳು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ. ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಅರ್ಜಿಗಳನ್ನು ಪಡೆಯಬಹುದಾಗಿದೆ.
ಜುಲೈ 25 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದ್ದು, ಅಂಚೆ ಮೂಲಕ ಅರ್ಜಿ ಮತ್ತು ಪಠ್ಯಕ್ರಮ ಪಡೆಯಲಿಚ್ಛಿಸುವವರು ರೂ.10 ಸ್ಟಾಂಪ್ ಹಚ್ಚಿದ ಸ್ವವಿಳಾಸವುಳ್ಳ ಲಕೋಟೆಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560 002 ಇಲ್ಲಿಗೆ ಕಳುಹಿಸಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಇದೇ ವಿಳಾಸಕ್ಕೆ ಕಳುಹಿಸಿಕೊಡಬೇಕೆಂದು ಅಕಾಡೆಮಿ ರಿಜಿಸ್ಟ್ರಾರ್ ಎಸ್.ಹೆಚ್.ಶಿವರುದ್ರಪ್ಪ ತಿಳಿಸಿದ್ದಾರೆ.