ಶಿವಮೊಗ್ಗ : ತೋಟಗಾರಿಕೆ ಇಲಾಖೆ ಶಿಕಾರಿಪುರ ವತಿಯಿಂದ 2022-23 ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಲು ಸಹಾಯಧನ ನೀಡುವ ಸಲುವಾಗಿ ನೋಂದಣಿ ಅರ್ಜಿಗಳನ್ನು ನ.03 ರಿಂದ ವಿತರಿಸಲಾಗುತ್ತದೆ.
ಆಸಕ್ತ ರೈತರು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಹಾಗೂ ತೋಟಗಾರಿಕೆ ಇಲಾಖೆ, ಶಿಕಾರಿಪುರ ಕಚೇರಿಯನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆಯಬಹುದು. ಪಡೆದಂತಹ ನೋಂದಣಿ ಅರ್ಜಿಗಳನ್ನು ದಾಖಲಾತಿಗಳ ಸಹಿತ ಸಲ್ಲಿಸಲು ಡಿಸೆಂಬರ್ 15 ಕಡೆಯ ದಿನವಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಶಿಕಾರಿಪುರ ಇವರು ತಿಳಿಸಿದ್ದಾರೆ.