ಶಿವಮೊಗ್ಗ: ಇಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಗೆ ಮತದಾನ ನಡೆಯಿತು. ಈ ಚುನಾವಣೆಗೆ ನಿರ್ದೇಶಕರ ಸ್ಥಾನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಸ್ಪರ್ಧಿಸಿದ್ದರು. ಇಂತಹ ಚುನಾವಣೆಯಲ್ಲಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಇಂದು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 12 ಕ್ಷೇತ್ರಗಳಿಗೆ ಬೆಳಗ್ಗೆ 9.00 ರಿಂದ ಸಂಜೆ 4.00 ರ ವರೆಗೆ ಮತದಾನ ನೆಡೆಯಿತು. ಆ ಬಳಿಕ ಮತಏಣಿಕೆ ಕೂಡ ನಡೆದು, ಫಲಿತಾಂಶ ಪ್ರಕಟವಾಗಿದೆ.

 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಸಾಗರ ತಾಲ್ಲೂಕು ಕ್ಷೇತ್ರದಿಂದ ಶಾಸಕ ಗೋಪಾಲಕೃಷ್ಣ ಬೇಳೂರು, ರತ್ನಾಕರ ಹೊನಗೋಡು ಕಣದಲ್ಲಿದ್ದರು. ತೀವ್ರ ಪೈಪೋಟಿಯ ನಡುವೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಭರ್ಜರಿ ಗೆಲುವು ಸಾಧಿಸಿರೋದಾಗಿ ತಿಳಿದು ಬಂದಿದೆ.

ಅಂದಹಾಗೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 12 ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆದಿತ್ತು. ಅಂತಿಮ ಕಣದಲ್ಲಿ ಒಟ್ಟು 27 ಅಭ್ಯರ್ಥಿಗಳು ಅಂತಿಮ ಉಳಿದಿದ್ದರು.

ವರದಿ: ವಸಂತ ಬಿ ಈಶ್ವರಗೆರೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ, ರಾಜೀನಾಮೆ ನೀಡುವವರೆಗೂ ಹೋರಾಟ: ಆರ್‌.ಅಶೋಕ್

‘ರಾಕೇಶ್ ಶೆಟ್ಟಿ’ ವಿರುದ್ಧ ‘ರೌಡಿ ಶೀಟರ್’ ಓಪನ್ ಮಾಡಿ: ‘ಗಿರೀಶ್ ಮಟ್ಟೆಣ್ಣವರ’ ಆಗ್ರಹ

Share.
Exit mobile version