ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಸಮನ್ಸ್ ಪ್ರಶ್ನಿಸಿ ಆರ್.ಎಂ ಮಂಜುನಾಥಗೌಡ ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಆರ್.ಎಂ ಮಂಜುನಾಥಗೌಡಗೆ ಬಿಗ್ ಶಾಕ್ ನೀಡಿದೆ.
ನಕಲಿ ಚಿನ್ನ ಅಡವಿಟ್ಟು ಸಾಲ ನೀಡಿದ ಆರೋಪದಡಿ 2014ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅವ್ಯವಹಾರ ಸಂಬಂಧ ಪ್ರಕರಣ ದಾಖಲಾಗಿತ್ತು. 2021ರಲ್ಲಿ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು.
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಇಡಿ ಎಂಟ್ರಿಯಾಗಿತ್ತು. ಇಡಿಯಿಂದ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿನ 63 ಕೋಟಿ ಹಗರಣ ಸಂಬಂಧ ಆರ್.ಎಂ ಮಂಜುನಾಥಗೌಡಗೆ ಸಮನ್ಸ್ ಜಾರಿಗೊಳಿಸಿತ್ತು.
ಇಡಿ ಜಾರಿಗೊಳಿಸಿದ್ದಂತ ಸಮನ್ಸ್ ಪ್ರಶ್ನಿಸಿ ಹೈಕೋರ್ಟ್ ಗೆ ಆರ್.ಎಂ ಮಂಜುನಾಥಗೌಡ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ವಿಭಾಗಿಯ ಪೀಠವು ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ.
BREAKING NEWS: ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆ: ಐವರು ಯೋಧರಿಗೆ ಗಾಯ
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗೆ HPV ಲಸಿಕೆ: ಸಚಿವ ದಿನೇಶ್ ಗುಂಡೂರಾವ್