ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಬಂಗಾರ ಇರಿಸಿ ಕೋಟ್ಯಂತರ ಸಾಲ ನೀಡಿದ ಹಗರಣದಲ್ಲಿ ಬ್ಯಾಂಕ್ ನ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ನಿನ್ನೆ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತತ 11 ಗಂಟೆಗಳ ಕಾಲ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಅಲ್ಲದೇ ಅವರ ನಿವಾಸ ಸೇರಿದಂತೆ 8 ಕಂಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಗೆಸ್ಟ್ ಹೌಸ್ ಮೇಲೂ ದಾಳಿ ನಡೆಸಿ, ಅಲ್ಲಿದ್ದಂತ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ ಅವರನ್ನು ವಶಕ್ಕೆ ಪಡೆದಿದ್ದರು. ಸತತ ವಿಚಾರಣೆಯ ನಂತ್ರ ಇಂದು ಮಂಜುನಾಥ್ ಗೌಡ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದು, ಅವರನ್ನು 1ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರುಪಡಿಸಿರುವುದಾಗಿ ತಿಳಿದು ಬಂದಿದೆ.
ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ಕೋಟ್ಯಂತರ ರೂಪಾಯಿ ಹಣ ದುರ್ಬಳಕೆ ಮಾಡಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ 2018ರಲ್ಲಿ ಪ್ರಕರಣ ದಾಖಲಾಗಿತ್ತು. ಆ ವೇಳೆ ಮಂಜುನಾಥ್ ಗೌಡ ಅವರನ್ನು ಎಸಿಬಿ ಬಂಧಿಸಿತ್ತು. ಆದರೇ ಚಾರ್ಜ್ ಶೀಟ್ ನಲ್ಲಿ ಮಂಜುನಾಥ್ ಗೌಡ ಅವರ ಹೆಸರನ್ನೇ ಕೈಬಿಡಲಾಗಿತ್ತು. ಬಳಿಕ ಇಡಿ ಎಂಟ್ರಿಕೊಟ್ಟು ಇಸಿಐಆರ್ ದಾಖಲು ಮಾಡಿ, ತನಿಖೆಗೆ ಮುಂದಾಗಿತ್ತು. ಈ ತನಿಖೆಗೆ ಹೈಕೋರ್ಟ್ ಮೂಲಕ ಮಂಜುನಾಥ್ ಗೌಡ ತಡೆಯಾಜ್ಞೆ ತಂದಿದ್ದರು. ನಿರಂತರ ಕಾನೂನು ಹೋರಾಟದ ಬಳಿಕ ಹೈಕೋರ್ಟ್ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಇಡಿ ತನಿಖೆಗೆ ನೀಡಿದ್ದಂತ ತಡೆಯಾಜ್ಞೆಯನ್ನು ತೆರವುಗೊಳಿಸಿತ್ತು.
ನರೇಗಾ ಯೋಜನೆಯ ಕೂಲಿ ಹಣವನ್ನು ಬ್ಯಾಂಕ್ ಸಾಲ ಬಾಕಿಗೆ ಹೊಂದಾಣಿಕೆ ಮಾಡುವಂತಿಲ್ಲ: ರಾಜ್ಯ ಸರ್ಕಾರ ಆದೇಶ
ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ತಪ್ಪದೇ ಇದನ್ನೊಮ್ಮೆ ಓದಿ.!