ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಜಿಲ್ಲೆಯ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಆಗಸ್ಟ್ 20ರಿಂದ 22ರವರೆಗೆ ಮೂರು ದಿನಗಳ ಕಾಲ ಡಿ.ದೇವರಾಜ ಅರಸುರವರ 107ನೇ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ವೈಶಿಷ್ಟ್ಯಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಡಿ.ದೇವರಾಜ ಅರಸು ಜನ್ಮದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಅರಸುರವರ ಜನ್ಮದಿನಾಚರಣೆ ನಡೆಯುವ ಮೂರು ದಿನಗಳ ಕಾಲ ಸಭಾ ಕಾರ್ಯಕ್ರಮದೊಂದಿಗೆ ಪ್ರದರ್ಶನ ಮಳಿಗೆ, ಇತರೆ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದವರು ತಿಳಿಸಿದರು.

ಶಿವಮೊಗ್ಗ: ಮೆಕ್ಕೆಜೋಳ ಬೆಳೆ ಹಾನಿ: ವೈಯಕ್ತಿಕ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಡಿಸಿ ಸೂಚನೆ

ಅರಸುರವರ ದೂರದೃಷ್ಠಿ ಮತ್ತು ಹಿಂದುಳಿದ ವರ್ಗಗಳ ಏಳಿಗೆಯ ಬಗ್ಗೆ ಅವರಿಗಿದ್ದ ಬದ್ದತೆಯ ಹಿನ್ನೆಲೆಯನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗ ಜಿಲ್ಲೆಯಲ್ಲಿ ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗೆ ಶ್ರಮಿಸಿರುವ ವ್ಯಕ್ತಿ, ಸಂಘ-ಸಂಸ್ಥೆಗಳಿಗೆ ಜಿಲ್ಲಾ ಮಟ್ಟದ ಡಿ.ದೇವರಾಜ ಅರಸು ಪ್ರಶಸ್ತಿ ನೀಡಿ ಗೌರವಿಸಲು ಉದ್ದೇಶಿಸಲಾಗಿದೆ. ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಜಿಲ್ಲಾಧಿಕಾರಿಗಳ ಆಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದವರು ತಿಳಿಸಿದ್ಧಾರೆ.

ಅರಸುರವರ ಪ್ರಶಸ್ತಿಗೆ ಪ್ರಸ್ತಾಪಿಸಲ್ಪಡುವ ವ್ಯಕ್ತಿಯು ದೇವರಾಜ ಅರಸುರವರ ಧ್ಯೇಯೋದ್ಧೇಶಗಳನ್ನು ಹೊಂದಿದ್ದು, ಆ ನಿಟ್ಟಿನಲ್ಲಿ ಕಾರ್ಯನಿರತರಾಗಿರಬೇಕು. ಅರಸುರವರು ಕಾರ್ಯಗತಗೊಳಿಸಿದ ಯೋಜನೆ, ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರಾಗಿರಬೇಕು. ಹಿಂದುಳಿದ ವರ್ಗಗಳನ್ನು ಸಂಘಟಿಸುವುದರ ಜೊತೆಗೆ ಮೀಸಲಾತಿ, ಶಿಕ್ಷಣ, ಸಾಮಾಜಿಕ ಪರಿವರ್ತನೆಗಾಗಿ ಶ್ರಮಿಸುತ್ತಿರುವವರಾಗಿರಬೇಕು. ಹಿಂದುಳಿದ ವರ್ಗಗಳ ಶಿಕ್ಷಣ, ಆರ್ಥಿಕಾಭಿವೃದ್ಧಿ, ಔದ್ಯೋಗಿಕ ಕ್ಷೇತ್ರಗಳಲ್ಲಿ ಕಾರ್ಯನಿರತನಾಗಿದ್ದು, ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುರುತಿಸಲ್ಪಟ್ಟಿರಬೇಕು. ಅತ್ಯಂತ ಹಿಂದುಳಿದ ಜನಾಂಗವನ್ನು ಮುಖ್ಯವಾಹಿನಿಗೆ ಕರೆತರಲು ಪ್ರತ್ಯೇಕವಾಗಿ ಅಥವಾ ಪರೋಕ್ಷವಾಗಿ ಶ್ರಮಿಸುತ್ತಿರಬೇಕು.

BREAKING NEWS: ಆ.15ರಂದು ಸರ್ಕಾರದಿಂದಲೇ ‘ಚಾಮರಾಜಪೇಟೆ ಈದ್ಗಾ ಮೈದಾನ’ದಲ್ಲಿ ‘ಧ್ವಜಾರೋಹಣ’ – ಸಚಿವ ಆರ್ ಅಶೋಕ್ ಘೋಷಣೆ

ಡಿ.ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆಯಾದ ವ್ಯಕ್ತಿ, ಸಂಘ-ಸಂಸ್ಥೆಗೆ ಆಗಸ್ಟ್ 20ರಂದು ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯುವ ಭವ್ಯ ಸಮಾರಂಭದಲ್ಲಿ ರೂ. 50,000/-ಗಳ ನಗದು ಹಾಗೂ ಸ್ಮರಣಿಕೆಯೊಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದವರು ತಿಳಿಸಿದ್ದಾರೆ.

ಆಗಸ್ಟ್ 20ರಂದು ಬೆಳಿಗ್ಗೆ 11ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಡಿ.ದೇವರಾಜ ಅರಸುರವರ ಜನ್ಮ ದಿನಾಚರಣೆ ಕಾರ್ಯಕ್ರಮ, ಡಿ.ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ ಹಾಗೂ ಹಿಂದುಳಿದ ವರ್ಗಗಳ ವಿವಿಧ ಕಾಯಕ ಸಮುದಾಯದವರಾದ ಬಡಗಿ, ನೇಕಾರ, ಕಮ್ಮಾರ, ಕುಂಬಾರ, ವಿಶ್ವಕರ್ಮ ಮುಂತಾದ ಕುಲಕಸುಬುದಾರರು ತಯಾರಿಸಿರುವ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಾಡಲು ಹಾಗೂ ವಿವಿಧ ಇಲಾಖಾ ಕಾರ್ಯಕ್ರಮಗಳ ಪ್ರಾತ್ಯಕ್ಷಿತೆ ನೀಡಲು ಮಳಿಗೆಗಳನ್ನು ತೆರೆಯಲಾಗುವುದು. ಈ ಮಳಿಗೆಗಳನ್ನು ಆಹ್ವಾನಿತ ಗಣ್ಯರಿಂದ ಉದ್ಘಾಟಿಸಲಾಗುವುದು. ಈ ಮಳಿಗೆಗಳು ಆಗಸ್ಟ್ 24ರವರೆಗೆ ಪ್ರತಿದಿನ ಸಾರ್ವಜನಿಕ ವೀಕ್ಷಣಗೆ ತೆರೆದಿರಲಿವೆ ಎಂದವರು ತಿಳಿಸಿದರು.

BIG NEWS: ‘ಕರ್ನಾಟಕ ಎಸಿಬಿ’ ರದ್ದು, ಬಾಕಿ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾಯಿಸಿ ‘ಹೈಕೋರ್ಟ್’ ಮಹತ್ವದ ಆದೇಶ | HC abolishes Karnataka ACB

ಅಂದು ಬೆಳಿಗ್ಗೆ ಶಿಷ್ಟಾಚಾರದಂತೆ ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು, ಗಣ್ಯರು ಹಾಗೂ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರನ್ನು ಆಹ್ವಾನಿಸಲಾಗುವುದು. ಇದೇ ಸಂದರ್ಭದಲ್ಲಿ ಡಿ.ದೇವರಾಜ ಅರಸುರವರ ಜೀವನಾದರ್ಶನಗಳ ಕುರಿತು ವಿಷಯ ತಜ್ಞರಿಂದ ವಿಶೇಷ ಉಪನ್ಯಾಸಗಳನ್ನು ಏರ್ಪಡಿಸಲಾಗುವುದು ಎಂದವರು ತಿಳಿಸಿದರು.

ಆಗಸ್ಟ್ 21ರಂದು ಜಿಲ್ಲಾ ಮಟ್ಟದಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ವಿದ್ಯಾರ್ಥಿನಿಲಯಗಳ ಮಕ್ಕಳಿಗೆ ಯೋಗ ಮತ್ತು ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಯನ್ನು ಏರ್ಪಡಿಸಿ, ಜಿಲ್ಲಾ ಮತ್ತು ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾದ ಸ್ಪರ್ಧಾಳುಗಳಿಗೆ ಪ್ರಶಸ್ತಿಪತ್ರ ಹಾಗೂ ಬಹುಮಾನ ವಿತರಣೆ ಸಮಾರಂಭವನ್ನು ಏರ್ಪಡಿಸಲಾಗುವುದು.

BIG BREAKING NEWS: ಎಸಿಬಿ ರಚನೆ ಆದೇಶ ರದ್ದು ಪಡಿಸಿದ ಹೈಕೋರ್ಟ್: ಎಸಿಬಿ, ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಮಹತ್ವದ ಆದೇಶ

ಆಗಸ್ಟ್ 22ರಂದು ಶಾಲಾ ಮಕ್ಕಳಿಗೆ ಅರಣ್ಯದ ಮಹತ್ವದ ಕುರಿತು ತಿಳುವಳಿಕೆ ಮತ್ತು ಗಿಡನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಅಲ್ಲದೇ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗುವುದು. ಅಂದು ಸಮಾರೋಪ ಸಮಾರಂಭದ ನಂತರ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದರು.
ಈ ಎಲ್ಲಾ ಕಾರ್ಯಕ್ರಮಗಳ ವ್ಯವಸ್ಥಿತ ಅನುಷ್ಠಾನಕ್ಕಾಗಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಇಲಾಖಾ ಅಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

Share.
Exit mobile version