ವರದಿ : ವಸಂತ ಬಿ ಈಶ್ವರಗೆರೆ
ಶಿವಮೊಗ್ಗ: ನಿನ್ನೆಯಷ್ಟೇ ರಾಜ್ಯ ಸರ್ಕಾರದಿಂದ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಕಟಿಸಲಾಗಿತ್ತು. ಈ ಬೆನ್ನಲ್ಲೇ ಶಿವಮೊಗ್ಗ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ( District Level Best Teacher Award ) ಪ್ರಕಟಿಸಲಾಗಿದೆ. ಈ ಬಾರಿ 21 ಶಿಕ್ಷಕರಿಗೆ ಪ್ರಶಸ್ತಿಯ ಗರಿಮೆ ಸಂದಿದೆ.
‘BMTC ಡ್ರೈವರ್ ಕಂ ಕಂಡಕ್ಟರ್’ಗೆ ಕಿರುಕುಳ, ಆತ್ಮಹತ್ಯೆ ಕೇಸ್: RR ನಗರ ಡಿಪೋ ಮ್ಯಾನೇಜರ್ ಸಸ್ಪೆಂಡ್
ಈ ಕುರಿತಂತೆ ಶಿವಮೊಗ್ಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದು, 2022-23ನೇ ಸಾಲಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಾರಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕಿರಿಯ ಪ್ರಾಥಮಿಕ ವಿಭಾಗದಿಂದ 7, ಹಿರಿಯ ಪ್ರಾಥಮಿಕ ವಿಭಾಗದಿಂದ 7 ಹಾಗೂ ಪ್ರೌಢಶಾಲಾ ವಿಭಾಗದಿಂದ 7 ಜನ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಶಿಕ್ಷಕರಿಗೆ ತಲಾ 5,000ದಂತೆ ನಗದು ಪರಸ್ಕಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
Job Alert: ‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ‘ಆರೋಗ್ಯ ಇಲಾಖೆ’ಯಿಂದ ‘558 ಹುದ್ದೆ’ಗಳ ಭರ್ತಿಗೆ ಅರ್ಜಿ ಆಹ್ವಾನ
ಇದಲ್ಲದೇ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಆಯ್ಕೆ ಸಮಿತಿಯ ವತಿಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಇತರೆ 7 ಜನರ ಶಿಕ್ಷಕರಿಗೆ ವಿಶೇಷ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಆಯ್ಕೆಯಾದ ಶಿಕ್ಷಕರಿಗೆ ದಿನಾಂಕ 05-09-2022ರಂದು ಕುವೆಂಪು ರಂಗಮಂದಿರದಲ್ಲಿ ನಡೆಯಲಿರುವಂತ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಹೇಳಿದ್ದಾರೆ.
BIG NEWS : ಮುರುಘಾ ಶ್ರೀಗಳಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ
ಹೀಗಿದೆ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಪಟ್ಟಿ