ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಪರಿಣಾಮ ಬೇಕರಿಯೊಂದು ಧಗಧಗಿಸಿ ಹೊತ್ತಿ ಉರಿದಿರುವಂತ ಘಟನೆ ಆನಂದಪುರದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಆನಂದಪುರದಲ್ಲಿ ಬೇಕರಿಯೊಂದರಲ್ಲಿನ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ, ಬೇಕರಿ ಹೊತ್ತಿ ಉರಿದಿದೆ. ಬೆಂಕಿ ಉಂಟಾಗುತ್ತಿದ್ದಂತೆ ಸ್ಥಳೀಯರು ನಂದಿಸುವ ಪ್ರಯತ್ನ ಮಾಡಿದರೂ, ಅದು ಸಾಧ್ಯವಾಗಲಿಲ್ಲ.
ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೇಕರಿಯ ಮುಂಭಾಗದಲ್ಲಿ ಪೆಟ್ರೋಲ್ ಬಂಕ್ ಇದ್ದ ಕಾರಣ ಜನರಲ್ಲಿ ಹೆಚ್ಚು ಆತಂಕ ಮೂಡಿಸಿತ್ತು. ಆದರೇ ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ ನಂದಿಸುವ ಮೂಲಕ ಮುಂದಾಗಲಿದ್ದಂತ ಅನಾಹುತವನ್ನು ತಪ್ಪಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Good News: ‘ಮದ್ಯಪ್ರಿಯ’ರಿಗೆ ಸಿಹಿಸುದ್ದಿ: ಶೀಘ್ರವೇ ಕರ್ನಾಟಕದಲ್ಲಿ ಶೇ.15ರಿಂದ 25ರಷ್ಟು ‘ದರ ಇಳಿಕೆ’
ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ನಿಮಗೆ ಸಿಗಲಿರುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ