ಶಿವಮೊಗ್ಗ: ಕೇಂದ್ರ/ರಾಜ್ಯ ಸರ್ಕಾರದ ಆದೇಶದಂತೆ ದಿ: 16-07-2022 ರಿಂದ 30-09-2022 ರವರೆಗೆ ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ 18 ವರ್ಷ ಮೇಲ್ಪಟ್ಟ ಎಲ್ಲ ಸಾರ್ವಜನಿಕರಿಗೆ ಕೋವಿಡ್ 19 ಬೂಸ್ಟರ್ ಡೋಸ್ ಲಸಿಕೆಯನ್ನು ( Covid19 Booster Dose ) ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತಿದ್ದು, ದಿ: 30-09-2022 ಲಸಿಕೆ ನೀಡಲು ಕೊನೆಯ ದಿನವಾಗಿರುತ್ತದೆ.
ಈ ಕುರಿತಂತೆ ಮಾತನಾಡಿರುವಂತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ( DHO Dr Rajesh Suragihalli ) ಅವರು, 18 ವರ್ಷ ಮೇಲ್ಪಟ್ಟ ಎಲ್ಲಾ ಸಾರ್ವಜನಿಕರು ಕೋವಿಡ್ 19 ಬೂಸ್ಟರ್ ಡೋಸ್ ಲಸಿಕೆಯನ್ನು ಜಿಲ್ಲಾ ಆಸ್ಪತ್ರೆ, ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ನಗರ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.
BIGG NEWS: ಕಾರಂಜಾ ಮುಳುಗಡೆ; ರೈತರಿಗೆ ಹೆಚ್ಚುವರಿ ಪರಿಹಾರ ನೀಡುವುದಕ್ಕೆ ಆಗೋಲ್ಲ- ಗೋವಿಂದ್ ಕಾರಜೋಳ