ಶಿವಮೊಗ್ಗ : ಶಿವಮೊಗ್ಗದಲ್ಲಿ ಕೆಲ ದಿನಗಳ ಹಿಂದೆ ಶಂಕಿತ ಇಬ್ಬರು ಉಗ್ರರನ್ನು ಬಂಧಿಸಿರುವ ಪೊಲೀಸರಿಗೆ ಬಹುಮಾನ ನೀಡಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಇಬ್ಬರು ಉಗ್ರರನ್ನು ಬಂಧಿಸಿ ದೊಡ್ಡ ಅನಾಹುತ ತಪ್ಪಿಸಿದ ಶಿವಮೊಗ್ಗ ಪೊಲೀಸರಿಗೆ ಬಹುಮಾನ ನೀಡಲಾಗುವುದು. ಶಂಕಿತ ಉಗ್ರರನ್ನು ಬಂಧಿಸಿ ಮುಂದೆ ನಡೆಯಬಹುದಾಗಿದ್ದ ದೊಡ್ಡ ಅನಾಹುತವನ್ನು ಶಿವಮೊಗ್ಗ ಪೊಲೀಸರು ತಪ್ಪಿಸಿದ್ದಾರೆ ಎಂದರು.
ಶಂಕಿತ ಉಗ್ರರಿಗೆ ಕರಾವಳಿ ಮತ್ತು ಕೇರಳದೊಂದಿಗೆ ಸಂಪರ್ಕವಿದೆ. ಇಂತಹ ಶಂಕಿತ ಉಗ್ರರ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಸೂಕ್ತ ಸಮಯದಲ್ಲಿ ಬಂಧಿಸುವ ಮೂಲಕ ದೊಡ್ಡ ಅಪಾಯ ತಪ್ಪಿಸಿದ್ದಾರೆ. ಅವರಿಗೆ ಬಹುಮಾನ ನೀಡಲಾಗುವುದು ಎಂದು ಘೋಷಿಸಿದ್ದಾರೆ.