ಶಿವಮೊಗ್ಗ : ಲೋಕಸಭಾ ಚುನಾವಣೆ ಹಿನ್ನೆಲೆ ವಿವಿಧ ಚೆಕ್‍ಪೋಸ್ಟ್‍ಗಳಲ್ಲಿ ಅಕ್ರಮ ಮದ್ಯ ಸಾಗಾಣಿಕೆ ಮತ್ತು ಮಾರಾಟವನ್ನು ಪರಿಶೀಲಿಸಲಾಗುತ್ತಿದ್ದು ಏ.02 ರಂದು ಪೊಲೀಸ್ ಇಲಾಖೆ ವತಿಯಿಂದ ರೂ.1762 ಮೊತ್ತದ 3.96 ಲೀ ಹಾಗೂ ಅಬಕಾರಿ ಇಲಾಖೆಯಿಂದ ರೂ.8350 ಮೊತ್ತದ 21.38 ಲೀ ಒಟ್ಟು ರೂ. 10112.05 ಮೌಲ್ಯದ 25.34 ಲೀ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸಣ್ಣಮನೆ ಗ್ರಾಮದಲ್ಲಿ ನರೇಗಾ ಕಾರ್ಮಿಕರಿಗೆ ಮತದಾನ ಜಾಗೃತಿ
ಶಿವಮೊಗ್ಗ: ಸಾಗರ ತಾಲ್ಲೂಕಿನ ಹಿರೇನೆಲ್ಲೂರು ಗ್ರಾಮ ಪಂಚಾಯಿತಿಯ ಸಣ್ಣಮನೆ ಗ್ರಾಮದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರಿಗೆ ಮತದಾನದ ಕುರಿತು ವಿನೂತನವಾಗಿ ಜಾಗೃತಿ ಮೂಡಿಸಲಾಯಿತು.
ಸ್ವೀಪ್ ಅಕ್ಷರದಂತೆ ಜನರನ್ನು ನಿಲ್ಲಿಸಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಕಡ್ಡಾಯವಾಗಿ ಮತದಾನ ಮಾಡುವ ಬಗ್ಗೆ ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ಸಾಗರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುನೀತಾ ಎ ಹೆಚ್, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕಿ ಪೂರ್ಣಿಮಾ ಎಂ.ಆರ್, ತಾಲ್ಲೂಕು ಪಂಚಾಯಿತಿ ಸಿಬ್ಬಂದಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿಯವರು ಹಾಜರಿದ್ದರು.