ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಹಳೆ ಇಕ್ಕೇರಿಯ ಗಸಗಸೆಕೊಡ್ಲು ಗ್ರಾಮ ಜಯಂತ್ ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರೋದಾಗಿ ತಿಳಿದು ಬಂದಿದೆ. ಅವರ ಸ್ಥಿತಿ ಗಂಭೀರವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಅಧಿಕಾರಿಗಳ ಬೈಗುಳ, ಆತ್ಮಹತ್ಯೆಗೆ ಯತ್ನ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹಳೆ ಇಕ್ಕೇರಿಯ ಸಮೀಪದ ಜಯಂತ್ ಗಸಗಸೆಕೊಡ್ಲು ಅವರು ತಮ್ಮ ಮನೆಯ ಸಮೀಪದಲ್ಲಿ ಕುಸಿಯುವ ಸ್ಥಿತಿಯಲ್ಲಿದ್ದಂತ ಮಣ್ಣುನ್ನು ಸಾಗಾಣಿಕೆಯನ್ನು ಮಾಡಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ಅವರ ವಿರುದ್ಧ ಅಕ್ರಮವಾಗಿ ಮಣ್ಣು ಸಾಗಾಣಿಕೆ ಆರೋಪ ಕೇಳಿ ಬಂದಿತ್ತು. ಇದೇ ವಿಚಾರವಾಗಿ ಅಧಿಕಾರಿಗಳನ್ನು ಸ್ಥಳೀಯ ಆಡಳಿತಾಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾಗಿದ್ದಂತ ವೇಳೆಯಲ್ಲಿ ಜಯಂತ್ ಅವರನ್ನು ತರಾಟೆಗೆ ತೆಗೆದುಕೊಂಡು, ಬೈದಿದ್ದರು ಎನ್ನಲಾಗುತ್ತಿದೆ.
ಸ್ಥಿತಿ ಗಂಭೀರ, ಶಿವಮೊಗ್ಗದಲ್ಲಿ ಮುಂದುವರೆದ ಚಿಕಿತ್ಸೆ
ಇಂದು ಮಧ್ಯಾಹ್ನ ಇದೇ ವಿಚಾರವಾಗಿ ಮನನೊಂದಂತ ಜಯಂತ್ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಅವರನ್ನು ಪುತ್ರ ಕೂಡಲೇ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಸಲಹೆ ಮಾಡಿದ ಕಾರಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದೀಗ ಜಯಂತ್ ಅಳಿಕೇರಿ ಗಸಗಸೆಕೊಡ್ಲು ಅವರ ಆರೋಗ್ಯ ಗಂಭೀರವಾಗಿರೋದಾಗಿ ಹೇಳಲಾಗುತ್ತಿದೆ.
ಡೆತ್ ನೋಟ್ ಪತ್ತೆ, ಹಲವರ ಹೆಸರು ಉಲ್ಲೇಖ
ಅಂದಹಾಗೇ ಜಯಂತ್ ಅವರು ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದೆ. ಅವರ ಜೇಬಿನಲ್ಲಿ ಪತ್ತೆಯಾದಂತ ಡೆತ್ ನೋಟ್ ನಲ್ಲಿ ತಮ್ಮ ಸಾವಿಗೆ ಕಾರಣ ಯಾರೆಲ್ಲ ಎಂಬುದನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು..








