ಶಿವಮೊಗ್ಗ : ಕರ್ನಾಟಕ ರಾಜ್ಯೋತ್ಸವ ( Karnataka Rajyotsava ) ಅಂಗವಾಗಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮದಲ್ಲಿ ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ( Minister Dr Narayanagowdha ) ಅವರು ಕನ್ನಡ ಗೀತೆಗಳ ಗಾಯನಕ್ಕೆ ದನಿಗೂಡಿಸಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ನಗರದ ವಿವಿಧ ಕನ್ನಡ ಸಂಘಟನೆಗಳು, ಅಧಿಕಾರಿಗಳು, ಸಿಬ್ಬಂದಿ, ಶಾಲಾ-ಕಾಲೇಜು ( School and College ) ವಿದ್ಯಾರ್ಥಿಗಳು, ಸಾರ್ವಜನಿಕರು ಕನ್ನಡದ ಗೀತೆಗಳನ್ನು ಹಾಡಿದರು.
ಕಾರ್ಯಕ್ರಮದಲ್ಲಿ ನಾಡಗೀತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡುಗಳನ್ನು ಹಾಡಲಾಯಿತು. ಜಿಲ್ಲೆಯಲ್ಲಿ ಕೋಟಿ ಕಂಠ ಗಾಯನಕ್ಕಾಗಿ ಒಟ್ಟು 3.33 ಲಕ್ಷ ಜನರು ಆನ್ಲೈನ್ನಲ್ಲಿ ನೋಂದಾಯಿಸಿಕೊಂಡಿದ್ದರು.
ಗಾಯನ ಕಾರ್ಯಕ್ರಮದ ನಂತರ ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಭಾಗಿಯಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದೀರಿ. ಎರಡನೇ ಬಾರಿ ಈ ಕಾರ್ಯಕ್ರಮ ಆಯೋಜನೆಗೊಂಡಿದ್ದು ಕನ್ನಡಿಗರಿಗೆ ಇದೊಂದು ಹೆಮ್ಮೆಯಾಗಿದೆ. ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ ಬೇರೆಡೆಗಳಲ್ಲಿ ಸಹ ನಡೆಯುತ್ತಿರುವುದು ಸಂತಸದ ವಿಚಾರವಾಗಿದ್ದು, ಕಾರ್ಯಕ್ರಮ ಆಯೋಜಿಸಿದ ಮುಖ್ಯಮಂತ್ರಿಗಳು ಮತ್ತು ಯಶಸ್ವಿಗೊಳಿಸಿದ ಎಲ್ಲರಿಗೆ ಅಭಿನಂದಿಸುತ್ತೇನೆ ಎಂದರು.
ಒಂದೇ ದಿನದಲ್ಲಿ ಕೊರೊನಾ ಪ್ರಕರಣಗಳು ದ್ವಿಗುಣ, 24 ಗಂಟೆಗಳಲ್ಲಿ 2208 ಹೊಸ ಪ್ರಕರಣಗಳು ಪತ್ತೆ
ಶಾಸಕರಾದ ಕೆ.ಎಸ್.ಈಶ್ವರಪ್ಪ ಮಾತನಾಡಿ, ಕನ್ನಡದ ಬಗೆಗಿನ ನಮ್ಮ ಅಭಿಮಾನ ಇಡೀ ಪ್ರಪಂಚಕ್ಕೆ ಈ ಕಾರ್ಯಕ್ರಮದ ಮೂಲಕ ಗೊತ್ತಾಗಿದೆ. ಕನ್ನಡ ನಮ್ಮ ಮೊದಲ ಆದ್ಯತೆಯಾಗಿದ್ದು, ಕನ್ನಡದ ಹಾಡುಗಳನ್ನು ಸಾಮೂಹಿಕವಾಗಿ ಹೇಳುವ ಮೂಲಕ ಒಂದಾಗಿದ್ದೇವೆ ಎಂಬ ಸಂದೇಶವನ್ನು ನೀಡಿದ್ದೇವೆ. ಈ ಕಾರ್ಯಕ್ರಮದ ಮೂಲಕ ಎಲ್ಲರಲ್ಲಿ ಕನ್ನಡದ ಜಾಗೃತಿ ಮೂಡಿಸಿದ್ದೇವೆ. ಇಂತಹ ಅತ್ಯುತ್ತಮ ಕಾರ್ಯಕ್ರಮ ಆಯೋಜಿಸಿರುವ ಮುಖ್ಯಮಂತ್ರಿಗಳಿಗೆ ಅಭಿನಂದನೆ ತಿಳಿಸಿದರು.
ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ ಮಾತನಾಡಿ, ಕೋಟಿ ಕಂಠಗಳ ನಿನಾದ ಮುಗಿಲೆತ್ತರಕ್ಕೇರುತ್ತಿದೆ. ಎರಡು ಜ್ಞಾನಪೀಠ ಪ್ರಶಸ್ತಿ ಪಡೆದ ಏಕಮಾತ್ರ ಜಿಲ್ಲೆ ನಮ್ಮದಾಗಿದ್ದು, ಇಬ್ಬರು ರಾಷ್ಟ್ರಕವಿಗಳನ್ನು ಹೊಂದಿರವ, ಎಲ್ಲ ರೀತಿಯ ಪ್ರಾಕೃತಿಕ ಸೊಬಗ£ ಮತ್ತು ಕನ್ನಡದ ಮೊದಲ ಕವಯಿತ್ರಿ ಅಕ್ಕಮಹಾದೇವಿ ಹುಟ್ಟಿದ ನಮ್ಮ ಜಿಲ್ಲೆಯ ಸ್ವರ ವಿಶೇಷವಾಗಿದ್ದು ಕಾರ್ಯಕ್ರಮ ಅವಕಾಶ ಮಾಡಿಕೊಟ್ಟ ರಾಜ್ಯ ಸರ್ಕಾರಕ್ಕೆ ಹಾಗೂ ಯಶಸ್ವಿಗೊಳಿಸಿದ ಎಲ್ಲರಿಗೆ ಧನ್ಯವಾದಗಳು ಎಂದು ತಿಳಿಸಿದರು.
ಕೇಂದ್ರ ಸರ್ಕಾರದಿಂದ ಪಿಂಚಣಿದಾರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ (ಡಿಆರ್) ಗೆ ಸಂಬಂಧಿಸಿದಂತೆ ಆದೇಶ
ಕಾರ್ಯಕ್ರಮದಲ್ಲಿ ಕನ್ನಡ ಸಂಕಲ್ಪವನ್ನು ಬೋಧಿಸಲಾಯಿತು. ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಅರುಣ್ ಮತ್ತು ತಂಡ ಶಿವಮೊಗ್ಗ ಇವರು ಕಾರ್ಯಕ್ರಮ ನಡೆಸಿಕೊಟ್ಟರು. ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಜಿಲ್ಲಾ ಪಂಚಾಯತ್ ಸಿಇಓ ಎನ್.ಡಿ.ಪ್ರಕಾಶ್, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಕೋಟಿ ಕಂಠ ಗಾಯನ: ಜಿಲ್ಲಾಧಿಕಾರಿಗಳ ಕಚರಿ ಆವರಣ, ಜೋಗ ಜಲಪಾತ ಎದುರು, ಜೋಗ, ನರಸಿಂಹಸ್ವಾಮಿ ದೇವಸ್ಥಾನ ಎದುರು, ಭದ್ರಾವತಿ, ಬಿದನೂರು ಕೋಟೆ ಎದುರು, ನಗರ, ಹೊಸನಗರ, ಕುವೆಂಪು ಮನೆ, ಕುಪ್ಪಳಿ, ತೀರ್ಥಹಳ್ಳಿ, ಶಾಹಿ ಗಾರ್ಮೆಂಟ್ಸ್, ಶಿವಮೊಗ್ಗ, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಶಿವಮೊಗ್ಗ, ಕುವೆಂಪು ವಿಶ್ವವಿದ್ಯಾಲಯ ಶಂಕರಘಟ್ಟ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಸೇರಿದಂತೆ ದೇಶೀಯ ವಿದ್ಯಾಶಾಲೆ, ಪೆಸಿಟ್, ಜವಾಹರಲಾಲ್ ನೆಹರು ತಾಂತ್ರಿಕ ಕಾಲೇಜು, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಹಾಗೂ ಇತರೆ ವಿದ್ಯಾಲಯಗಳಲ್ಲಿಯೂ ಸಹ ಕೋಟಿ ಕಂಠ ಗಾಯನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.