ಶಿವಮೊಗ್ಗ: ಮೇ.7ರಂದು ಶಿವಮೊಗ್ಗ ಜಿಲ್ಲಾ ಲೋಕಸಭಾ ಚುನಾವಣೆಗೆ ಮತದಾನ ನಡೆದಿತ್ತು. ಈ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬುದಾಗಿ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಆರೋಪಿಸಿದ್ದಾರೆ. ಹೀಗಾಗಿಯೇ ನಾಳೆ ಚುನಾವಣಾ ಆಯೋಗಕ್ಕೆ ದೂರು ನೀಡಿವುದಾಗಿ ತಿಳಿಸಿದ್ದಾರೆ.
ಬಿಜೆಪಿಯಿಂದ ಶಿವಮೊಗ್ಗ ಲೋಕಸಭಾ ಚುನಾವಣೆಗೆ ಪುತ್ರನಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿ ಕೆ.ಎಸ್ ಈಶ್ವರಪ್ಪ ಇದ್ದರು. ಆದ್ರೇ ಟಿಕೆಟ್ ಕೈತಪ್ಪಿತ್ತು. ಹೀಗಾಗಿ ಅವರು ಸಿಟ್ಟುಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು, ಸ್ಪರ್ಧೆ ಕೂಡ ನಡೆಸಿದ್ದರು.
ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ. ಈ ಸಂಬಂಧ ತನಿಖೆ ನಡೆಸುವಂತೆ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ನಾಳೆ ಬೆಳಿಗ್ಗೆ 11 ಗಂಟೆಗೆ ಚುನಾವಣಾ ಆಯೋಗಕ್ಕೆ ದೂರು ನೀಡಲಿದ್ದಾರೆ.
ನಾಳೆ ಬೆಳಿಗ್ಗೆ 11 ಗಂಟೆಗೆ ರಾಜ್ಯದ ಚುನಾವಣಾ ಆಯೋಗದ ಕಚೇರಿಗೆ ತೆರಳಲಿರುವಂತ ಅವರು, ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಲಿದ್ದಾರೆ. ಈ ಮೂಲಕ ಶಿವಮೊಗ್ಗ ಲೋಕಸಭಾ ಚುನಾವಣೆ ಅಕ್ರಮದ ಬಗ್ಗೆ ತನಿಖೆಗೆ ಮನವಿ ಮಾಡಲಿದ್ದಾರೆ.
ಅಂದಹಾಗೆ ಶಿವಮೊಗ್ಗ ಲೋಕಸಭಾ ಕಣದಲ್ಲಿ ಬಿಜೆಪಿಯಿಂದ ಬಿ.ವೈ ರಾಘವೇಂದ್ರ ಸ್ಪರ್ಧಿಸಿದ್ದರೇ, ಕಾಂಗ್ರೆಸ್ ಪಕ್ಷದಿಂದ ಗೀತಾ ಶಿವರಾಜ್ ಕುಮಾರ್ ಕಣದಲ್ಲಿದ್ದಾರೆ. ಕೆ.ಎಸ್ ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ.
‘BMTC ಬಸ್ ಪ್ರಯಾಣಿಕ’ರೇ ಗಮನಿಸಿ: ಮತ್ತೆ ‘QR ಕೋಡ್’ ಮೂಲಕ ‘ಟಿಕೆಟ್ ಖರೀದಿ ಸೇವೆ’ ಪುನರಾರಂಭ
BREAKING: ಕೆ.ಆರ್ ನಗರ ‘ಸಂತ್ರಸ್ತೆ ಕಿಡ್ನ್ಯಾಪ್’ ಕೇಸ್: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ