ಶಿವಮೊಗ್ಗ: ದಿನಾಂಕ 04-11-2022ರ ನಾಳೆ ಸೊರಬ ತಾಲೂಕಿನ ( Sorba Taluk ) ರಂಗಮಂದಿರದಲ್ಲಿ ಜಾಗೃತಿ ಅರಿವು ಸಪ್ತಾಹ-2022 ಮತ್ತು ಸಾರ್ವಜನಿಕರಿಂದ ಲೋಕಾಯುಕ್ತ ಅಧಿಕಾರಿಗಳಿಂದ ( Karnataka Lokayukta ) ಕುಂದುಕೊರತೆ ಅರ್ಜಿಯನ್ನು ಸ್ವೀಕರಿಸುವಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಬರಲ್ಲಾ ಅಂದ್ರೂ ವಧುವಿನ ಕೈ-ಕಾಲು ಹಿಡಿದು ಮನೆಗೆ ಹೊತ್ಕೊಂಡೋದ ಅತ್ತೆ ಮನೆಯವ್ರು | WATCH VIDEO

ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸೊರಬ ತಹಶೀಲ್ದಾರ್ ಕಚೇರಿಯಿಂದ ( Sorba Tahashildar Office ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಅವರ ಅಧ್ಯಕ್ಷತೆಯಲ್ಲಿ ದಿನಾಂಕ 04-11-2022ರ ನಾಳೆ ಸೊರಬದ ರಂಗ ಮಂದಿರದಲ್ಲಿ ಜಾಗೃತಿ ಅರಿವು ಸಪ್ತಾಹ-2022 ಮತ್ತು ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದೆ.

BIGG NEWS : ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್ : ನ್ಯಾಯಬೆಲೆ ಅಂಗಡಿಗಳಲ್ಲೇ ಸಿಗಲಿವೆ ಈ ಎಲ್ಲಾ ಸೇವೆಗಳು!

ಸೊರಬ ತಾಲೂಕಿನ ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವುದರಲ್ಲಿ ಬೇಜ ವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ, ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಲಿಖಿತ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ರೈಲ್ವೆ ಪ್ರಯಾಣಿಕರಿಗೆ ಬಹುಮುಖ್ಯ ಮಾಹಿತಿ: ಈ ಮಾರ್ಗದಲ್ಲಿ ವಿಶೇಷ ರೈಲುಗಳ ಸಂಚಾರ | South Western Railway

ನವೆಂಬರ್ 4, 2022ರ ನಾಳೆ ಸೊರಬ ತಾಲೂಕಿನ ಸಾರ್ವಜನಿಕರು ಈ ಕುಂದು ಕೊರತೆ ಅರ್ಜಿ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.

ವರದಿ: ವಸಂತ ಬಿ ಈಶ್ವರಗೆರೆ

BREAKING NEWS : ‘ಪ್ರವೀಣ್ ನೆಟ್ಟಾರು’ ಹತ್ಯೆ ಆರೋಪಿಗಳ ಸುಳಿವು ನೀಡಿದವರಿಗೆ 14 ಲಕ್ಷ ರೂ.ಬಹುಮಾನ ಘೋಷಿಸಿದ ‘NIA’

Share.
Exit mobile version