ಶಿವಮೊಗ್ಗ: ದಿನಾಂಕ 04-11-2022ರಂದು ಸೊರಬ ತಾಲೂಕಿನಲ್ಲಿ ಜಾಗೃತಿ ಅರಿವು ಸಪ್ತಾಹ-2022 ಮತ್ತು ಸಾರ್ವಜನಿಕರಿಂದ ಲೋಕಾಯುಕ್ತ ಅಧಿಕಾರಿಗಳಿಂದ ( Karnataka Lokayukta ) ಕುಂದುಕೊರತೆ ಅರ್ಜಿಯನ್ನು ಸ್ವೀಕರಿಸುವಂತ ಕಾರ್ಯಕ್ರಮವನ್ನು ತಾಲೂಕು ಆಡಳಿತದಿಂದ ಹಮ್ಮಿಕೊಳ್ಳಲಾಗಿದೆ.
‘ನಮ್ಮ ಮೆಟ್ರೋ’ ಆನ್ ಲೈನ್ ಟಿಕೆಟ್ ಗೆ ಭರ್ಜರಿ ರೆಸ್ಪಾನ್ಸ್ : ಮೊದಲ ದಿನವೇ 1,669 ಟಿಕೆಟ್ ಮಾರಾಟ |Namma Metro
ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸೊರಬ ತಹಶೀಲ್ದಾರ್ ಕಚೇರಿಯಿಂದ ( Sorba Tahashildar Office ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಅವರ ಅಧ್ಯಕ್ಷತೆಯಲ್ಲಿ ದಿನಾಂಕ 04-11-2022ರಂದು ಸೊರಬದ ರಂಗ ಮಂದಿರದಲ್ಲಿ ಜಾಗೃತಿ ಅರಿವು ಸಪ್ತಾಹ-2022 ಮತ್ತು ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದೆ.
BIG NEWS : ತಮಿಳುನಾಡಿನಲ್ಲಿ ಸುರಿದ ಭಾರೀ ಮಳೆಗೆ ಇಬ್ಬರು ಬಲಿ, ಶಾಲೆಗಳಿಗೆ ರಜೆ ಘೋಷಣೆ
ಸೊರಬ ತಾಲೂಕಿನ ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವುದರಲ್ಲಿ ಬೇಜವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ, ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಲಿಖಿತ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
BIG BREAKING NEWS: ‘ರಾಜ್ಯ ಸರ್ಕಾರ’ದಿಂದ ‘ಆಡಳಿತ ಯಂತ್ರ’ಕ್ಕೆ ಚುರುಕು: ‘9 ಐಎಎಸ್ ಅಧಿಕಾರಿ’ಗಳಿಗೆ ಹುದ್ದೆ ಹಂಚಿಕೆ
ನವೆಂಬರ್ 4, 2022ರಂದು ಸೊರಬ ತಾಲೂಕಿನ ಸಾರ್ವಜನಿಕರು ಈ ಕುಂದು ಕೊರತೆ ಅರ್ಜಿ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.
ವರದಿ: ವಸಂತ ಬಿ ಈಶ್ವರಗೆರೆ