ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ವೈದ್ಯಕೀಯ/ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಆಯೋಜಿಸಲಾಗಿದ್ದ ಮೂಲ ದಾಖಲಾತಿ ಪರಿಶೀಲನೆ ನೇರ ಸಂದರ್ಶನದಲ್ಲಿ ಭಾಗವಹಿಸಿದ್ದ ವೈದ್ಯಾಧಿಕಾರಿಗಳು, ಶೂಶ್ರೂಷಕಿಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು (ಪಿಹೆಚ್‌ಸಿಓ), ಆರೋಗ್ಯ ನಿರೀಕ್ಷಣಾಧಿಕಾರಿಗಳು, ತಾಲೂಕು ಆಶಾ ಮೇಲ್ವಿಚಾರಕರು, ನೇತ್ರ ಸಹಾಯಕರರು ಈ ಎಲ್ಲಾ ಅಭ್ಯರ್ಥಿಗಳ ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸೂಚನೆ ಫಲಕದಲ್ಲಿ ಪ್ರಕಟಿಸಲಾಗಿದೆ.
ಅಭ್ಯರ್ಥಿಗಳ ಆಕ್ಷೇಪಣೆ ಇದ್ದಲ್ಲಿ ಲಿಖಿತ ರೂಪದಲ್ಲಿ ಆ.26 ರೊಳಗಾಗಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಎನ್.ಹೆಚ್.ಎಂ. ವಿಭಾಗಕ್ಕೆ ಸಲ್ಲಿಸುವಂತೆ ಜಿಲ್ಲಾ ಆರ್‌ಸಿಹೆಚ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಶಿವಮೊಗ್ಗ: ಆ.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut