ಶಿವಮೊಗ್ಗ: ಸಿಗಂದೂರಿಗೆ ತೆರಳುತ್ತಿದ್ದಂತ ಪ್ರವಾಸಿಗರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ಅದರಲ್ಲಿದ್ದಂತ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕುಂಸಿ ಸಮೀಪದ ಕೆರೆಕೋಡಿ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ ಬೆಂಗಳೂರಿನ ನೆಲಮಂಗಲ ಮೂಲದ ಚಂದನ್ (26) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಬೆಂಗಳೂರಿನಿಂದ ಯುವಕರ ತಂಡವು ಶಿವಮೊಗ್ಗ ಜಿಲ್ಲೆಯ ಸಾಗರದ ಸಿಗಂದೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದರು. ಕಾರಿನಲ್ಲಿ ಕೊಡಗು ಮೂಲದ ನಂದನ್, ಕೋಲಾರದ ಕೋದಂಡ, ಹಾಸನದ ಭರತ್ ಹಾಗೂ ಮಂಡ್ಯ ಜಿಲ್ಲೆಯ ಯೋಗೇಶ್ ಎಂಬುವರಿದ್ದರು. ಇವರಿಗೆ ಗಂಭೀರ ಗಾಯವಾಗಿದ್ದು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
BREAKING: ಸಿದ್ದರಾಮಯ್ಯ ಪತ್ನಿ ಬೆನ್ನಲ್ಲೇ ‘ಮಲ್ಲಿಕಾರ್ಜುನ ಖರ್ಗೆ’ಯಿಂದಲೂ ‘5 ಎಕರೆ ಸರ್ಕಾರಿ ಭೂಮಿ’ ವಾಪಸ್!
BREAKING : ರಾಜ್ಯ ಸರ್ಕಾರ ಹಳೆ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ವಿಚಾರ : ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ