ಶಿವಮೊಗ್ಗ: ಸಾಗರದ ಪ್ರಮುಖ ರಸ್ತೆಯಾಗಿರುವಂತ ಬಿಹೆಚ್ ರಸ್ತೆಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂಬುದಾಗಿ ತಿಳಿದು ಬಂದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರದ ಬಿಹೆಚ್ ರಸ್ತೆಯ ಹೀರೋ ಹೊಂಡಾ ಶೋ ರೂಂ ಸಮೀಪದಲ್ಲಿ ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳು ಯುವಕನನ್ನು ಶಿವಮೊಗ್ಗದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಮತ್ತೋರ್ವ ಯುವಕ ಸಾಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಸಂಬಂಧ ಸಾಗರ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING : ಹುಬ್ಬಳ್ಳಿಯಲ್ಲಿ ನಟೋರಿಯಸ್ ರೌಡಿಶೀಟರ್ `ಸೈಂಟಿಸ್ಟ್ ಮಂಜ್ಯಾ’ ಸೇರಿ ಮೂವರು ಅರೆಸ್ಟ್.!
BREAKNG : ಬೆಂಗಳೂರಿನಲ್ಲಿ `ಕಾವೇರಿ 2.O’ ತಂತ್ರಾಂಶ ಹ್ಯಾಕ್ : `FIR’ ದಾಖಲು.!