ಶಿವಮೊಗ್ಗ: ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯು 2022-23ನೇ ಸಾಲಿನ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ನಲ್ಲಿ ನವೀನ ಹಾಗೂ ನವೀಕರಣ ವಿದ್ಯಾರ್ಥಿಗಳಿಂದ SATS ID ಮುಖಾಂತರ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಪೋಷಕರ ಮೊಬೈಲ್ ಸಂಖ್ಯೆ, ವಿದ್ಯಾರ್ಥಿಯ ಮತ್ತು ಪೋಷಕರ ಆಧಾರ್ ಸಂಖ್ಯೆ/ಇ.ಐ.ಡಿ. ಸಂಖ್ಯೆ, ಆದಾಯ ಪ್ರಮಾಣ ಪತ್ರ, ಆಧಾರ್ ಸಂಖ್ಯೆ ಲಿಂಕ್ ಆಗಿರುವ ರಾಷ್ಟ್ರೀಯಕೃತ ಬ್ಯಾಂಕ್ ಖಾತೆ ಪಾಸ್ ಪುಸ್ತಕ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
BIGG NEWS : “ನನ್ನ ಆತ್ಮನಿರ್ಭರ ಭಾರತ ಕನಸನ್ನ ಅನೇಕರು ಗೇಲಿ ಮಾಡಿದ್ರು” ; ಪ್ರಧಾನಿ ಮೋದಿ
ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08282-263761 ನ್ನು ಸಂಪರ್ಕಿಸುವುದು.
ಇನ್ನೂ ಕೈಮಗ್ಗ ಮತ್ತು ಜವಳಿ ಇಲಾಖೆಯು 2022-23 ನೇ ಸಾಲಿನ ಶೈಕ್ಷಣಿಕ ಸಾಲಿಗೆ ನೇಕಾರರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು/ವಿಶ್ವವಿದ್ಯಾಲಯಗಳಲ್ಲಿ ಪಿಯುಸಿ/ ಐ.ಟಿ.ಐ/ ಡಿಪ್ಲೊಮಾ/ ಎಲ್ಲಾ ಬಿ.ಎ/ಬಿ.ಎಸ್.ಸಿ/ಬಿ.ಕಾಂ. ಇತ್ಯಾದಿ, ಎಲ್.ಎಲ್.ಬಿ/ಪ್ಯಾರಾಮೆಡಿಕಲ್/ಬಿ.ಫಾರ್ಮಾ/ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್ಗಳು, ಎಂಬಿಬಿಎಸ್/ಬಿ.ಇ/ಬಿ.ಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್ಗಳನ್ನು ವ್ಯಾಸಂಗ ಮಾಡುತ್ತಿರುವ ನೇಕಾರರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ರಾಜ್ಯದ ನೋಂದಾಯಿತ ನೇಕಾರರ ಅವರ ಮಕ್ಕಳನ್ನು ಗುರುತಿಸುವ ಸಲುವಾಗಿ ಆನ್ಲೈನ್ ಮೂಲಕ “ಸೇವಾ ಸಿಂಧು” ತಂತ್ರಾಂಶದ ಕರ್ನಾಟಕ ಒನ್ ಮತ್ತು ಗ್ರಾಮ ಒನ್ರಲ್ಲಿ ಮಾತ್ರ ಈ ಸೇವೆ ಲಭ್ಯವಿರುತ್ತದೆ. ಅದರಂತೆ ನಿಗದಿತ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಸಲ್ಲಿಸುವುದು. ನಂತರ ವಿದ್ಯಾರ್ಥಿವೇತನಕ್ಕಾಗಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (SSP) ದಲ್ಲಿ ಆನ್ಲೈನ್ ಮೂಲಕ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವಂತೆ ಜವಳಿ ಅಭಿವೃದ್ಧಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವಿಭಾಗೀಯ/ಜಿಲ್ಲಾ ಮಟ್ಟದ ಕಚೇರಿಗಳನ್ನು ಹಾಗೂ ಇಲಾಖೆಯ ವೆಬ್ಸೈಟ್ www.karnatakadht.org ನ್ನು ಸಂಪರ್ಕಿಸುವುದು.