ಶಿವಮೊಗ್ಗ: ಸ್ವಾತಂತ್ರ್ಯ ದಿನಾಚರಣೆ ಸಲುವಾಗಿ ಹಾಕಲಾಗಿದ್ದಂತ ವಿ ಡಿ ಸಾವರ್ಕರ್ ಬ್ಯಾನರ್ ತೆರವುಗೊಳಿಸಿದ ಕಾರಣಕ್ಕಾಗಿ, ಗಲಾಟೆ ಉಂಟಾಗಿದೆ. ಹಿಂದೂ ಸಂಘಟನೆಗಳ ಗಲಾಟೆಯಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಕೂಡ ನಡೆಸಿದ್ದಾರೆ.
75ನೇ ಸ್ವಾತಂತ್ರ್ಯೋತ್ಸವದ ಹಿನ್ನಲೆಯಲ್ಲಿ ಅಳವಡಿಸಲಾಗಿದ್ದಂತ ವಿ ಡಿ ಸಾವರ್ಕರ್ ಬ್ಯಾನರ್ ತೆರವು ಗೊಳಿಸಿದ ವಿಚಾರಕ್ಕಾಗಿ ಹಿಂದೂ ಸಂಘಟನೆಗಳಿಂದ ಶಿವಮೊಗ್ಗ ನಗರದ ಅಮೀರ್ ಅಹ್ಮದ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗಿದೆ.
BIGG NEWS : ಅಮೃತ ಸರೋವರ ಯೋಜನೆಯಲ್ಲಿ 100 ಕೆರೆಗಳ ಅಭಿವೃದ್ಧಿ : ಸಚಿವ ಹಾಲಪ್ಪ ಆಚಾರ
ಕಿಡಿಗೇಡಿಗಳು ಸಾವರ್ಕರ್ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಆಕ್ರೋಶ ವ್ಯಕ್ತ ಪಡಿಸಿದಂತ ಹಿಂದೂ ಸಂಘಟನೆಗಳ ಕಾರ್ಯಕರ್ತರು, ರಸ್ತೆ ತಡೆ ನಡೆಸಿ, ಪ್ರತಿಭಟನೆ ಕೂಡ ನಡೆಸಲಾಯಿತು.
ಸ್ಥಳದಲ್ಲಿ ಬಿಗುವಿನ ವಾತಾವಣ ಸೃಷ್ಠಿಯಾದ ಕಾರಣ, ಪೊಲೀಸರು ಗುಂಪು ಚದುರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ. ಅಲ್ಲದೇ ಬ್ಯಾನರ್ ತೆರವುಗೊಳಿಸಿದಂತ ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
BIGG NEWS : ಸ್ವಾತಂತ್ರ್ಯ ಬಂದರೂ ಸಮಾನತೆ, ಸಹೋದರತೆ ಧರ್ಮಾಧಾರಿತವಾಗುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ