ಶಿವಮೊಗ್ಗ: ವಿದ್ಯುತ್ ಕಾಮಗಾರಿಗಳ ಹಿನ್ನಲೆಯಲ್ಲಿ ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ನಾಳೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ.
ಈ ಬಗ್ಗೆ ಮೆಸ್ಕಾಂ ಮಾಹಿತಿ ಬಿಡುಗಡೆ ಮಾಡಿದ್ದು, ಜುಲೈ 28 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್.-5ರಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.
ಗೋಪಾಳಗೌಡ ಬಡಾವಣೆ, ಎ, ಬಿ, ಸಿ, ಡಿ, ಇ, ಎಫ್ ಬ್ಲಾಕ್, ಕೆ.ಹೆಚ್.ಬಿ, ಎಲ್.ಐ.ಜಿ, ಎಂ.ಐ.ಜಿ ಪ್ರೆಸ್ ಕಾಲೋನಿ, ನೀಲಮೇಘಮ್ ಲೇಔಟ್, ಅಲಹರೀಮ್ ಲೇಔಟ್, ಪೊಲೀಸ್ ಲೇಔಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದೆ.