ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಹಲವೆಡೆ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ನಾಳೆ ಕೈಗೊಳ್ಳಲಾಗುತ್ತಿದೆ. ಈ ಕಾರಣದಿಂದಾಗಿ ನಾಳೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಈ ಕುರಿತಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ: 15.12.2024 ರ ಭಾನುವಾರದಂದು 110/33/11 ಕೆವಿ ಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಈ ಕೆಳಗಿನ ಪ್ರದೇಶಗಳಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ.
ನಾಳೆ ಸಾಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ದಿನಾಂಕ 15.12.2024 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಎಫ್-8 ಮಾರಿಕಾಂಬ, ಎಫ್-15 ಆರ್.ಎಂ.ಸಿ, ಎಫ್-II ಎಸ್.ಎನ್.ನಗರ ಮತ್ತು ಗ್ರಾಮೀಣ ವ್ಯಾಪ್ತಿಯ ಎಫ್-2 ಮಾಲ್ವೆ, ಎಫ್-3 ಹೆಗ್ಗೋಡು, ಎಫ್-4 ಆವಿನಹಳ್ಳಿ, ಎಫ್-5 ವರದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು, ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ ಮಾರ್ಗದದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಸಾಗರ ಪಟ್ಟಣ, ಆವಿನಹಳ್ಳಿ, ಹೆಗ್ಗೋಡು, ಭೀಮನಕೋಣೆ ಕರೆಂಟ್ ಇರೋದಿಲ್ಲ.
ಯಡಜಿಗಳಮನೆ, ಕಲ್ಮನೆ, ಮಾಲ್ವೆ, ಭೀಮನೇರಿ, ಕೆಳದಿ, ಮಾಸೂರು, ಹಿರೇನೆಲ್ಲೂರು, ಪಡವಗೋಡು, ನಾಡಕಲಸಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಪವರ್ ಕಟ್ ಆಗಲಿದೆ ಎಂದಿದೆ.
ಎಚ್ಚರ ; ‘ಪ್ಯಾರಸಿಟಮಾಲ್’ ವಯಸ್ಸಾದವರಲ್ಲಿ ‘ಹೃದಯ, ಮೂತ್ರಪಿಂಡದ ಕಾಯಿಲೆ’ಗಳ ಅಪಾಯ ಹೆಚ್ಚಿಸುತ್ತೆ : ಅಧ್ಯಯನ
ನೀರಿನ ‘ಟ್ಯಾಂಕ್’ ಒಳಗೆ ಇಳಿಯದೇ ಸುಲಭವಾಗಿ ಸ್ವಚ್ಛಗೊಳಿಸೋದು ಹೇಗೆ ಗೊತ್ತಾ.?