ಶಿವಮೊಗ್ಗ : ಸಂತೇಕಡೂರು ವಿವಿ ವಿತರಣಾ ಕೇಂದ್ರದ ಉಂಬ್ಳೇಬೈಲು ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಲಕ್ಕಿನಕೊಪ್ಪ, ತೋಟದಕೆರೆ, ಹುರಳಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಕಾಕನಹಸೂಡಿ, ಲಿಂಗಾಪುರ, ಸಿದ್ದಮ್ಮಾಜಿ ಹೊಸೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿ: 16/11/2022 ರಂದು ಬೆ 10.00 ರಿಂದ ಸಂ. 6.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು ( Power Cut ), ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ( MESCOM ) ಪ್ರಕಟಣೆಯಲ್ಲಿ ಮನವಿ ಮಾಡಿದೆ.
ಗುಂಡಿಗಳ ಮೇಲೆ ಸಂಪತ್ತಿನ ಗೋಪುರ ಕಟ್ಟುವ ಈ ಬಿಜೆಪಿ ಸರಕಾರಕ್ಕೆ ಆತ್ಮಸಾಕ್ಷಿಯೇ ಇಲ್ಲ- HDK ಕಿಡಿ
ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ.15 ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು. ನ.15 ರ ಸಂಜೆ 4.10 ಕ್ಕೆ ತರೀಕೆರೆಯ ಹಳೆ ವಿಜ್ಞಾನ ಇಂಡಸ್ಟ್ರೀಸ್ ಲಿ. ಹೆಲಿಪ್ಯಾಡ್ನಿಂದ ಹೊರಟು 4.45 ಕ್ಕೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿ ಹೆಲಿಪ್ಯಾಡ್ಗೆ ಆಗಮಿಸಿ, ಆನವಟ್ಟಿಯ ಹೈಸ್ಕೂಲ್ ಗ್ರೌಂಡ್ ಆವರಣದಲ್ಲಿ ಆಯೋಜಿಸಲಾಗಿರುವ ಜನ ಸಂಕಲ್ಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 6.30 ಕ್ಕೆ ರಸ್ತೆ ಮೂಲಕ ಆನವಟ್ಟಿಯಿಂದ ಹೊರಟು ರಾತ್ರಿ 11 ಗಂಟೆಗೆ ಬೆಂಗಳೂರು ತಲುಪುವರು ಎಂದು ಪ್ರಕಟಣೆ ತಿಳಿಸಿದೆ.
ಡಿಸೆಂಬರ್ ವೇಳೆಗೆ ರಾಜ್ಯದ ಶೇ.50 ರಷ್ಟು ಅರ್ಹರಿಗೆ ಆಯುಷ್ಮಾನ್ ಕಾರ್ಡ್ ವಿತರಣೆ – ಸಚಿವ ಡಾ.ಕೆ.ಸುಧಾಕರ್