ಶಿವಮೊಗ್ಗ : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಇರುವುದರಿಂದ ನಿಧಿಗೆ, ದುಮ್ಮಳ್ಳಿ, ಓತಿಘಟ್ಟ, ಸೋಗಾನೆ, ಹಾರೆಕಟ್ಟೆ, ಬಿದರೆ, ಪಿಳ್ಳಂಗಿರಿ, ವೀರಭದ್ರ ಕಾಲೋನಿ, ಹಸೂಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ದಿನಾಂಕ 30.09.2022 ಮತ್ತು ದಿ: 01/10/2022 ರಂದು ಬೆಳಗ್ಗೆ 10.00 ಘಂಟೆಯಿಂದ ಸಂಜೆ 6.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು ( Power Cut ), ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ( MESCOM ) ತಿಳಿಸಿದೆ.
ಮಾಲ್ ನಲ್ಲಿ ಸಿನಿಮಾ ಪ್ರಮೋಷನ್ ವೇಳೆ ಇಬ್ಬರು ಮಲಯಾಳಂ ನಟಿರ ಮೇಲೆ ಲೈಂಗಿಕ ದೌರ್ಜನ್ಯ
ಅಲ್ಪಸಂಖ್ಯಾತ ವಿಧ್ಯಾರ್ಥಿಗಳಿಗೆ ಅರಿವು (ನವೀಕರಣ) ಯೋಜನೆಯಡಿ ಸಾಲಸೌಲಭ್ಯಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2022-23ನೇ ಸಾಲಿಗೆ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಆಂಗ್ಲೋಇಂಡಿಯನ್ ಸಮುದಾಯದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿರುವ ನವೀಕರಣ/ಸಿಇಟಿ/ಡಿ-ಸಿಇಟಿ/ಪಿಜಿ-ಸಿಇಟಿ/ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ವೃತ್ತಿಪರ ಕೋರ್ಸ್ಗಳಾದ ಎಂಬಿಬಿಎಸ್, ಎಂಡಿ., ಎಂಎಸ್., ಬಿಡಿಎಸ್., ಎಂಡಿಎಸ್., ಬಿ.ಇ., ಡೆಂಟಲ್, ಮೆಡಿಕಲ್, ಬಿಡಿಎಸ್, ಆಯುಷ್, ಆರ್ಟಿಟೆಕ್ಚರ್, ಟೆಕ್ನಾಲಜಿ ಕೋರ್ಸ್ಗಳಿಗೆ ಅರಿವು (ನವೀಕರಣ) ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಅರ್ಜಿಯನ್ನು ಇಲಾಖೆಯ ವೆಬ್ಸೈಟ್ www.kmdconline.karnataka.gov.in ರಲ್ಲಿ ಭರ್ತಿ ಮಾಡಿದ ಅರ್ಜಿಯ ಪ್ರಿಂಟೌಟ್ನ್ನು ತೆಗೆದುಕೊಂಡು ಆದಾಯ ಪ್ರಮಾಣ ಪತ್ರ (8 ಲಕ್ಷದೊಳಗಿರಬೇಕು), ಎಸ್ಎಸ್ಎಲ್ಸಿ, ಡಿಪ್ಲೊಮಾ/ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಶುಲ್ಕ ರಸೀದಿ, ಆಧಾರ್ಕಾರ್ಡ್, ರೇಷನ್ಕಾರ್ಡ್, ವಿಧ್ಯಾರ್ಥಿ/ಪೋಷಕರ ಫೋಟೋ,ಸಿಇಟಿ/ನೀಟ್ ಹಾಲ್ಟಿಕೇಟ್ಗಳನ್ನು, ನೋಟರಿಯಾಗಿರುವ ನಷ್ಟಪರಿಹಾರ ಬಾಂಡ್, ವಿಧ್ಯಾರ್ಥಿ/ಪೋಷಕರ ಸ್ವಯಂ ಘೋಷಣಾ ಪತ್ರ ಎಲ್ಲಾ ದಾಖಲೆಗಳನ್ನು ಭರ್ತಿ ಮಾಡಿ, ಕೆಇಎ ಕೌನ್ಸಿಲಿಂಗ್ ಮುಗಿದ ನಂತರ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಅಚ್ಯುತ್ರಾವ್ ಲೇಔಟ್, 4ನೇ ತಿರುವು, ನಂಜಪ್ಪ ಆಸ್ಪತ್ರೆ ಮುಂಭಾಗ, ಶಿವಮೊಗ್ಗ ಇಲ್ಲಿ ದಿ: 30/11/2022ರೊಳಗಾಗಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂ.: 08182-228262 ಮತ್ತು ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸುವುದು.