ಶಿವಮೊಗ್ಗ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ( 2nd PUC Supplementary Exam 2022 ) ದಿನಾಂಕ 12-08-2022 ರಿಂದ 25-08-2022ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
BIG NEWS: ಚಿಕ್ಕೋಡಿಯಲ್ಲಿ ಬ್ರೇಕ್ ಫೇಲ್ ಆಗಿ ‘ಸಾರಿಗೆ ಬಸ್’ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಈ ಕುರಿತಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಆಗಸ್ಟ್ 2022ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಂದು ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಸಾಗರ, ಹೊಸನಗರ, ಶಿಕಾರಿಪುರ ಮತ್ತು ಸೊರಬ ತಾಲೂಕುಗಳಲ್ಲಿನ 8 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷಾ ದಿನದಂದು ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ ಸೆಕ್ಷನ್ 144 ರಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.
ಇನ್ನೂ ಪರೀಕ್ಷಾ ಕೇಂದ್ರದ ಸುತ್ತ-ಮುತ್ತಲು ಪರೀಕ್ಷಾ ಅವಧಿಯಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ, ಅಧಿಕಾರಿಗಳನ್ನು ಹೊರತುಪಡಿಸಿ, ಇತರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳ ಬಳಿ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
BIG BREAKING NEWS: ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಅನುಮೋದನೆ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ