ಶಿವಮೊಗ್ಗ: ನಾಳೆ ಸಾಗರ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಹನ್ನೊಂದನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರಿ ನೌಕರರಿಗೆ ಒಂದು ದಿನದ ಓಓಡಿ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಈ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ದಿನಾಂಕ 20-03-2023ರಂದು ಕನ್ನಡ ಸಾಹಿತ್ಯ ಪರಿಷತ್ತು, ಸಾಗರ ತಾಲೂಕು ಇವರ ವತಿಯಿಂದ ತಾಲೂಕು ಮಟ್ಟದಲ್ಲಿ ಹನ್ನೊಂದನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗುತ್ತಿದೆ. ಈ ಸಮ್ಮೇಳನದಲ್ಲಿ ಭಾಗವಹಿಸುವ ನೌಕರರಿಗೆ ಒಂದು ದಿನದ ಓಓಡಿ ಸೌಲಭ್ಯವನ್ನು ನೀಡಲು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು ಕೋರಿದ್ದಾರೆ ಎಂದಿದ್ದಾರೆ.
ಈ ಮನವಿ ಪರಿಶೀಲಿಸಲಾಗಿದ್ದು, ದಿನಾಂಕ 20-03-2023ರಂದು ಸಾಗರ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ನೌಕರರಿಗೆ ಮಾತ್ರ ಒಂದು ದಿನದ ಓಓಡಿ ಸೌಲಭ್ಯವನ್ನು ಮಂಜೂರು ಮಾಡಲಾಗಿದೆ. ಈ ಸಮ್ಮೇಳನದಲ್ಲಿ ಭಾಗವಹಿಸುವ ನೌಕರರು ಹಾಜರಿ ಪ್ರಮಾಣ ಪತ್ರವನ್ನು ಪಡೆಯುವುದು ಕಡ್ಡಾಯ. ಇದನ್ನು ಆಯಾ ಇಲಾಖೆಯ ಮುಖ್ಯಸ್ಥರು ದೃಢೀಕರಿಸುವಂತೆ ತಿಳಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ
BIG NEWS: ಚೆನ್ನಗಿರಿಯಲ್ಲಿ ಬಿಜೆಪಿ vs ಬಿಜೆಪಿ ನಡುವೆ ತಾರಕಕ್ಕೇರಿದ ಸಮರ: ಅರ್ಧಕ್ಕೆ ನಿಂತ ವಿಜಯಸಂಕಲ್ಪ ಯಾತ್ರೆ
ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಸಹಾಯ ಧನ ವಿಸ್ತರಣೆಗೆ ಕ್ರಮ – ಸಿಎಂ ಬೊಮ್ಮಾಯಿ