ಶಿವಮೊಗ್ಗ : ಆಗಸ್ಟ್ 31 ರಂದು ಗಣೇಶ ಚತುರ್ಥಿ ( Ganesh Festival ) ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದ್ದು ಮಾಂಸ ಮಾರಾಟ ( Meat Selling ) ಉದ್ದಿಮೆದಾರರು ಅಂದು ಮಾರಾಟ ಬಂದ್ ಮಾಡಿ ಸಹಕರಿಸಲು ಕೋರಲಾಗಿದೆ.
BIG NEWS: ಶೀಘ್ರವೇ ಕಾಂಗ್ರೆಸ್ ಗೆ ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ ಗುಡ್ ಬೈ, ಬಿಜೆಪಿ ಸೇರ್ಪಡೆ.?!
ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸಲು ಸೂಚನೆಗಳು
ಗಣೇಶ ಚತುರ್ಥಿ ಹಬ್ಬಕ್ಕಾಗಿ ಗಣೇಶ ವಿಗ್ರಹಗಳನ್ನು ತಯಾರಿಸಲಾಗುತ್ತಿದ್ದು, ವಿಗ್ರಹಗಳ ತಯಾರಿಕೆಯಲ್ಲಿ ಪರಿಸರಕ್ಕೆ ಹಾನಿಯಾಗುವಂತಹ ವಸ್ತುಗಳು ಮತ್ತು ಬಣ್ಣಗಳನ್ನು ಉಪಯೋಗಿಸುವುದರಿಂದ ನೀರಿನ ಮೂಲಗಳಾದ ಕೆರೆ, ಬಾವಿ, ನದಿ ಇತ್ಯಾದಿಗಳಲ್ಲಿ ನೀರು ಕಲುಷಿತಗೊಂಡು ಪರಿಸರ ಹಾಗೂ ನೀರು ಹಾಳಾಗುವ ಸಂದರ್ಭಗಳು ಹೆಚ್ಚಾಗಿರುತ್ತವೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ದಿನಾಂಕ: 20-07-2016 ರಂದು ಹೊರಡಿಸಿರುವ ಅಧಿಸೂಚನೆಯಂತೆ ಜಲಮಾಲಿನ್ಯ(ತಡೆ ಮತ್ತು ನಿಯಂತ್ರಣ) ಕಾಯ್ದೆ 1974 ರ ಪ್ರಕಾರ ಕಲಂ 33(ಅ) ನಲ್ಲಿ ತಿಳಿಸಿರುವ ಪ್ರದತ್ತ ಅಧಿಕಾರವನ್ನು ಚಲಾಯಿಸಿ ರಾಜ್ಯದ ಕೆರೆಗಳಲ್ಲಿ ಹಾಗೂ ಇತರೆ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸಿನಿಂದ/ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ಇನ್ನು ಮುಂದೆ ಯಾವುದೇ ಜಲಗಳಲ್ಲಿ, ನದಿ ಕಾಲುವೆ/ಬಾವಿಗಳಲ್ಲಿ ವಿಸರ್ಜಿಸುವುದನ್ನು ಈ ಮೂಲಕ ನಿಷೇಧಿಸಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಜಲ ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯ್ದೆ 1974 ರ ಕಲಂ 45-ಎ ಅನ್ವಯ ದಂಡವನ್ನು (ರೂ.10,000) ಮತ್ತು ಜೈಲುವಾಸವನ್ನೂ ವಿಧಿಸುವ ಅವಕಾಶವಿರುತ್ತದೆ.
ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೇಂದ್ರ ಕಚೇರಿ, ಬೆಂಗಳೂರು ಇವರು ಈ ಕೆಳಕಂಡ ಅಂಶಗಳನ್ನು ಪಾಲಿಸುವಂತೆ ಸೂಚಿಸಿರುತ್ತಾರೆ.
BIGG BREAKING NEWS: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ10,256 ಹೊಸ ಪ್ರಕರಣಗಳು ಪತ್ತೆ, 68 ಸಾವು
• ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಬಣ್ಣರಹಿತ ಮಣ್ಣಿನ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ತದನಂತರ ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸ್ಥಳಗಳಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸುವುದು.
• ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕ್ಗಳಲ್ಲಿ/ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ(ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿ) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡುವುದು.
• ಗರಿಷ್ಟ 5 ಅಡಿ ಎತ್ತರದ ಮಣ್ಣಿನ ವಿಗ್ರಹಗಳನ್ನು ಮಾತ್ರ ತಯಾರಿಸುವುದು ಹಾಗೂ ಪ್ರತಿಷ್ಟಾಪಿಸುವುದು.
• ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು. ಪ್ಲಾಸ್ಟಿಕ್ ಫ್ಲೆಕ್ಸ್ ಮತ್ತಿತರ ವಸ್ತುಗಳ ಬಳಕೆ ನಿಷೇಧಿಸುವುದು ಹಾಗೂ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯತನಕ ಧ್ವನಿವರ್ಧಕಗಳ ಬಳಕೆ ನಿಷೇಧಿಸುವುದು.
• ನಿರ್ದಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಗಳನ್ನು ನಿಗದಿಪಡಿಸಿದ ಕಲ್ಯಾಣಿಗಳಲ್ಲಿ ವಿಲೇವಾರಿ ಮಾಡುವುದು.
• ಯಾವುದೇ ಕಾರಣಕ್ಕೂ ತಿಂಗಳುಗಳವರೆಗೆ ಗಣೇಶನನ್ನು ಕೂರಿಸುವುದು ಮತ್ತು ವಿಲೇವಾರಿ ಮಾಡುವುದನ್ನು ನಿರ್ಬಂಧಿಸಲಾಗಿದೆ.
• ಪಿಓಪಿ ಅಥವಾ ಬಣ್ಣವನ್ನು ಬಳಸಿದ ಮೂರ್ತಿಗಳನ್ನು ನೇರವಾಗಿ ಕೆರೆ, ಹೊಂಡ, ನದಿಗಳಿಗೆ ಬಿಡದೆ ಮೂರ್ತಿಗಳನ್ನು ವಿಸರ್ಜಿಸಲು ಕಲ್ಯಾಣಿಗಳು ಅಥವಾ ತಾತ್ಕಾಲಿಕ ಹೊಂಡಗಳನ್ನು ಸ್ಥಳೀಯ ಸಂಸ್ಥೆಗಳಲ್ಲಿ ನಿರ್ಮಿಸಿದ್ದು ಅದರಲ್ಲಿ ಮೂರ್ತಿಗಳನ್ನು ವಿಸರ್ಜಿಸುವುದು.
• ಉತ್ಸವ ಆಚರಿಸಲು ಬೇಕಾದ ಪೂರ್ವ ತಯಾರಿಗೆ ಸಂಬಂಧಿಸಿದಂತೆ ಪೊಲೀಸ್, ಸ್ಥಳೀಯ ಸಂಸ್ಥೆಗಳಿಂದ ಅನುಮೋದನೆ ಪಡೆಯುವುದು ನಿಯಮಾನುಸಾರ ಧ್ವನಿವರ್ಧಕಗಳನ್ನು ಬಳಸಲು ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ಪಡೆಯುವುದು.
ಈ ಅಧಿಸೂಚನೆಯನ್ನು ಪರಿಸರ ಮತ್ತು ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಆದೇಶಿಸಲಾಗಿದ್ದು, ಪರಿಸರಸ್ನೇಹಿ ಗಣೇಶ ಚತುರ್ಥಿ ಆಚರಣೆಗಾಗಿ ಜಿಲ್ಲೆಯ ನಾಗರೀಕರ ಸಹಕಾರ ಹಾಗೂ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪರಿಸರ ಅಧಿಕಾರಿಗಳು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಶಿವಮೊಗ್ಗ ಇವರು ಕೋರಿದ್ದಾರೆ .