ಶಿವಮೊಗ್ಗ: ಜಿಲ್ಲೆಯಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಭಾರೀ ಮಳೆಯಾಗುವ ಮುನ್ಸೂಚನೆಯಿರುವ ಕಾರಣ ಹೊಸನಗರ, ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ನಾಳೆ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಈ ಕುರಿತಂತೆ ಸಾಗರ ತಹಶೀಲ್ದಾರ್ ಆದೇಶ ಹೊರಡಿಸಿದ್ದು, ಸಾಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು ನಾಳೆಯೂ ಸಹ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಸಾಗರ ತಾಲ್ಲೂಕಿನಾದ್ಯಂತ ಎಲ್ಲಾ ಅಂಗನವಾಡಿಗಳು, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ: 31/07/2024 ರಂದು ರಜೆಯನ್ನು ಘೋಷಿಸಿದೆ. ಸದರಿ ದಿನದಂದು ನೀಡಿದ ರಜೆಯನ್ನು ಮುಂದಿನ ದಿನದಲ್ಲಿ ಹೊಂದಾಣಿಕೆ ಮಾಡಿ ಮಕ್ಕಳಿಗೆ ಪಾಠ ಪ್ರವಚನ ಮಾಡಲು ಸೂಚಿಸಿದ್ದಾರೆ.
ನಾಳೆ ಹೊಸನಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ
ಹೊಸನಗರ ತಾಲ್ಲೂಕಿನಲ್ಲಿ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರಣ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲೂಕಿನಾದ್ಯಂತ ದಿನಾಂಕ: 31-07-2024ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿದೆ. ಹಾಗೂ ಸದರಿ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ತಹಶೀಲ್ದಾರ್ ಆದೇಶಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ವಯನಾಡು ಭೂಕುಸಿತ: ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ‘ಇಬ್ಬರು IAS ಅಧಿಕಾರಿ’ಗಳನ್ನು ನಿಯೋಜನೆ
ವಯನಾಡ್ ಭೂಕುಸಿತ: ಕೇರಳದಲ್ಲಿ 2 ದಿನಗಳ ಶೋಕಾಚರಣೆ ಘೋಷಣೆ | Wayanad landslide