Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » `ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು’ ರೈಲ್ವೇ ಕಾಮಗಾರಿ ತ್ವರಿತಗೊಳಿಸಿ : ಕೇಂದ್ರ ಸಚಿವ ವಿ.ಸೋಮಣ್ಣ ಸೂಚನೆ
KARNATAKA

`ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು’ ರೈಲ್ವೇ ಕಾಮಗಾರಿ ತ್ವರಿತಗೊಳಿಸಿ : ಕೇಂದ್ರ ಸಚಿವ ವಿ.ಸೋಮಣ್ಣ ಸೂಚನೆ

By kannadanewsnow5727/09/2024 11:25 AM

ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಕಳೆದ ಒಂದು ದಶಕದ ಅವಧಿಯಲ್ಲಿ ರಾಜ್ಯ ರೈಲ್ವೇ ಕ್ಷೇತ್ರದಲ್ಲಿ ಅನೇಕ ಮಹತ್ವ ನಿರ್ಣಯಗಳನ್ನು ಕೈಗೊಂಡು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿರುವುದು ಎಲ್ಲರಲ್ಲೂ ಸಂತಸ ಮೂಡಿಸಿದೆ ಎಂದು ರೈಲ್ವೇ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಹೇಳಿದರು.

ಅವರು ಇಂದು ಶಿಕಾರಿಪುರದಲ್ಲಿ ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ರೈಲ್ವೇ ಅಭಿವೃದ್ಧಿ ಕಾಮಗಾರಿಗಳು, ಶಿವಮೊಗ್ಗ ಸಮೀಪದ ಕೋಟೆಗಂಗೂರು ಕೋಚಿಂಗ್ ಡಿಪೋ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಹಾನಗರಗಳಿಂದ ಗ್ರಾಮೀಣ ಪ್ರದೇಶಗಳವರೆಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ರೈಲ್ವೇ ಇಲಾಖೆಯು ಸೈನಿಕರಂತೆ ಹಗಲಿರುಳು ಕಾರ್ಯನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವೂ ಸಹ ನುಡಿದಂತೆ ಮುನ್ನಡೆಯುತ್ತಿದೆ ಎಂದ ಅವರು, ರೈಲ್ವೇ ಕ್ಷೇತ್ರ ಅಸಾಧಾರಣ ಪ್ರಗತಿ ಹಾಗೂ ಕ್ರಾಂತಿಕಾರಿ ಬದಲಾವಣೆಗೆ ಹೊಸಭಾಷ್ಯ ಬರೆದಿದೆ ಎಂದರು.

ರೈಲ್ವೇ ಕ್ಷೇತ್ರದ ಪ್ರಗತಿ ಜನಸಾಮಾನ್ಯರ ಬೇಡಿಕೆ ಎಂದು ಪರಿಗಣಿಸದೇ ಅವಶ್ಯಕತೆ ಎಂದೇ ಭಾವಿಸಲಾಗಿದೆ. ರಾಣೆಬೆನ್ನೂರು-ಶಿಕಾರಿಪುರ ಹೊಸ ರೈಲ್ವೇ ಮಾರ್ಗದ ಪ್ರಗತಿಯು ಆಶಾದಾಯಕವಾಗಿಲ್ಲ. ಮುಂದಿನ ಎಂಟು ದಿನಗಳೊಳಗಾಗಿ ಕೈಗೊಂಡ ಕ್ರಮಗಳ ಬಗ್ಗೆ ಸಂಬAಧಿತ ಇಲಾಖಾಧಿಕಾರಿಗಳು ಸಮಗ್ರ ವರದಿ ನೀಡುವಂತೆ ಸೂಚಿಸಿದ ಅವರು, ಈ ಭಾಗದಲ್ಲಿ ಭೂಸ್ವಾದೀನ ಪ್ರಕ್ರಿಯೆ ನಡೆಸುವ ಅಧಿಕಾರಿಗಳು ರೈತರಿಗೆ ಪರಿಹಾರಧನ ಒದಗಿಸುವ ಸಂದರ್ಭದಲ್ಲಿ ಮಾನವೀಯ ನೆಲೆಯಲ್ಲಿ ವ್ಯವಹರಿಸಿ, ಒಂದು ತಿಂಗಳೊಳಗಾಗಿ ಪರಿಹಾರಧನ ವಿತರಿಸುವಂತೆ ಸೂಚಿಸಿದರು.

ಮೋದಿಯವರ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಅನೇಕ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಶಿಕಾರಿಪುರ-ರಾಣೆಬೆನ್ನೂರು ಮಾರ್ಗದ ಭೂಸ್ವಾದೀನ ಪ್ರಕ್ರಿಯೆ ಸಮಾಧಾನಕರವಾಗಿದ್ದರೂ ರಾಣೆಬೆನ್ನೂರು-ಶಿಕಾರಿಪುರ ಮಾರ್ಗದಲ್ಲಿ ಭೂಸ್ವಾದೀನ ಪ್ರಕ್ರಿಯೆ ನಿರೀಕ್ಷೆಯಂತೆ ಪೂರ್ಣಗೊಂಡಿಲ್ಲ. ಇನ್ನೂ 642ಎಕರೆ ಭೂಪ್ರದೇಶ ಮಾಲೀಕರಿಂದ ರೈಲ್ವೇ ಇಲಾಖೆಗೆ ಹಸ್ತಾಂತರಿಸುವ ಪ್ರಕ್ರಿಯೆ ತುರ್ತಾಗಿ ಆಗಬೇಕಾಗಿದೆ. ಡಿಸೆಂಬರ್ ಮಾಸಾಂತ್ಯದೊಳಗಾಗಿ ಭೂಸ್ವಾದೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಂಯುಕ್ತವಾಗಿ ಈ ಕಾರ್ಯದಲ್ಲಿ ಸಮನ್ವಯತೆ ಸಾಧಿಸಿ, ಉದ್ದೇಶಿತ ಯೋಜನೆಯು ಕಾಲಮಿತಿಯಲ್ಲಿ ಪೂರ್ಣಗೊಳಿಸುವಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಉಷಾನರ್ಸಿಂಗ್ ಬಳಿಯ ವರ್ತುಲ ನವೀಕರಣಕ್ಕೆ ರೈಲ್ವೇ ಇಲಾಖೆಯಿಂದ ಮಹಾನಗರಪಾಲಿಕೆಗೆ ಈಗಾಗಲೇ 2ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಅಗತ್ಯವಿರುವ ಇನ್ನೂ 2.50ಕೋಟಿ ರೂ.ಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಣ ಬಿಡುಗಡೆಯಾಗುವ ನಿರೀಕ್ಷೆಯಿಂದ ಶೀಘ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತ ಶ್ರೀಮತಿ ಕವಿತಾ ಯೋಗಪ್ಪನವರ್ ಅವರು ಹೇಳಿದರು.

ರೈಲ್ವೇ ಇಲಾಖಾಧಿಕಾರಿಗಳು ಶಿವಮೊಗ್ಗ ಜಿಲ್ಲೆಯ ರೈಲ್ವೇ ಕಾಮಗಾರಿಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಲು ಸ್ಥಳೀಯ ಇಲಾಖಾಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಬೇಕು. ಅಮೃತ್ ಭಾರತ್ ಯೋಜನೆಯಡಿ ಶಿವಮೊಗ್ಗ, ಜಂಬಗಾರು ಹಾಗೂ ತಾಳಗುಪ್ಪ ರೈಲ್ವೇ ನಿಲ್ದಾಣಗಳ ಉನ್ನತೀಕರಣ ಕಾಮಕಾರಿಗಳಿಗಾಗಿ ಅಗತ್ಯ ಅನುದಾನವನ್ನು ಮಂಜೂರು ಮಾಡಿದೆ. ರೈಲ್ವೇ ಇಲಾಖೆಯ ಅಧಿಕಾರಿಗಳು ರಾಜ್ಯದ ಪ್ರತಿಷ್ಟಿತ ಜಿಲ್ಲೆಯಾಗಿರುವ ಶಿವಮೊಗ್ಗದ ವಿವಿಧ ರೈಲ್ವೇ ನಿಲ್ದಾಣಗಳನ್ನು ದೇಶದ ಮಾದರಿ ರೈಲ್ವೇನಿಲ್ದಾಣಗಳನ್ನಾಗಿ ನಿರ್ಮಿಸಬೇಕು. ಅದಕ್ಕಾಗಿ ಸ್ಥಳೀಯ ಅಧಿಕಾರಿ-ಜನಪ್ರತಿನಿಧಿಗಳ ಸಹಕಾರ ಪಡೆದು, ನೀಲನಕ್ಷೆ ತಯಾರಿಸುವಂತೆ ಅವರು ಸಲಹೆ ನೀಡಿದರು.

ಯಶವಂತಪುರ-ಶಿವಮೊಗ್ಗ ನಡುವೆ ವಾರಕ್ಕೆ ಮೂರು ಬಾರಿ ಸಂಚರಿಸುತ್ತಿರುವ ರೈಲನ್ನು ವಾರದ ಏಳು ದಿನಗಳ ಚಲಿಸುವಂತೆ ಹಾಗೂ ವಂದೇಭಾರತ್ ರೈಲು ಮಾರ್ಗವನ್ನು ಬೆಂಗಳೂರಿನಿAದ ತಾಳಗುಪ್ಪವರೆಗೆ ವಿಸ್ತರಿಸಲು ವಿಶೇಷ ಗಮನಹರಿಸಲಾಗುವುದು. ಕೋಟೆಗಂಗೂರು ಕೋಚಿಂಗ್ ಡಿಪೋ ಕಾಮಗಾರಿ ಪೂರ್ಣಗೊಳ್ಳುತ್ತಿದ್ದಂತೆಯೇ ಈ ವಿಷಯದ ಬಗ್ಗೆ ಗಮನಹರಿಸಲಾಗುವುದು ಎಂದ ಅವರು, ಹಲವು ದಶಕಗಳ ಅನೇಕ ಸಮಸ್ಯೆಗಳನ್ನು ಇತ್ಯರ್ಥಪಡಿಸುವಲ್ಲಿ ರೈಲ್ವೇ ಇಲಾಖೆ ವಿಶೇಷ ಗಮನಹರಿಸಿದೆ. ಇದರೊಂದಿಗೆ ಸಿರ್ಸಿ-ತಾಳಗುಪ್ಪ-ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ 158ಕಿ.ಮೀ ದೂರದ ರೈಲ್ವೇ ಕಾಮಗಾರಿ ಪೂರ್ವ ಸರ್ವೇ ನಡೆಸಲು ಆದೇಶ ಹೊರಡಿಸಲಾಗಿದೆ. ಅಂಕೋಲ-ತಾಳಗುಪ್ಪ ಮಾರ್ಗದ ಬಗ್ಗೆಯೂ ಗಮನಹರಿಸಲಾಗುವುದು ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳ ಸಕಾಲಿಕ ಸಹಕಾರ ಹಾಗೂ ಮಾರ್ಗದರ್ಶನದಿಂದಾಗಿ ಶಿವಮೊಗ್ಗ ಹಾಗೂ ಸುತ್ತಮುತ್ತಲ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಅನೇಕ ರೈಲ್ವೇ ಯೋಜನೆಗಳು ಯಶಸ್ಸು ಕಂಡಿವೆ. ಅಲ್ಲದೇ ದೇಶದಾದ್ಯಂತ ವರ್ಷಕ್ಕೆ ಸರಾಸರಿ ನೂರು ಕೋಟಿಗೂ ಹೆಚ್ಚಿನ ಜನ ರೈಲ್ವೇಪ್ರಯಾಣದ ಲಾಭ ಪಡೆದುಕೊಳ್ಳುತ್ತಿದ್ದಾರೆ ಎಂದರು.

ಮಲೆನಾಡಿನಿAದ ಬಯಲುಸೀಮೆಗೆ ಸಂಪರ್ಕ ಕಲ್ಪಿಸುವ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ನಿರ್ಮಾಣದಲ್ಲಿ ಶಿಕಾರಿಪುರ-ಶಿವಮೊಗ್ಗ ಮಾರ್ಗದ ಭೂಸ್ವಾದೀನ ಕಾರ್ಯ ತಕ್ಕಮಟ್ಟಿನ ಯಶಸ್ಸು ಕಂಡಿದೆ. ರಾಣೆಬೆನ್ನೂರು-ಶಿಕಾರಿಪುರ ನಡುವಿನ ಭೂಸ್ವಾದೀನ ಕಾರ್ಯ ನಿರೀಕ್ಷಿತ ಪ್ರಗತಿ ಸಾಧ್ಯವಾಗಿಲ್ಲ. ಸಂಬAಧಿಸಿದ ಇಲಾಖಾಧಿಕಾರಿಗಳು ಈ ಬಗ್ಗೆ ವಿಶೇಷ ಗಮನಹರಿಸಿ, ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು. ಹಾರನಹಳ್ಳಿ ರೈಲ್ವೇ ನಿಲ್ದಾಣದ ಪ್ಲಾಟಫಾರಂನ್ನು ಅಭಿವೃದ್ಧಿಪಡಿಸಲು ಇಲಾಖೆಯು ಈಗಾಗಲೇ 2ಕೋಟಿ ರೂ.ಗಳನ್ನು ಮಂಜೂರು ಮಾಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.

ಸಭೆಯಲ್ಲಿ ಸೌತ್ ವೆಸ್ಟçನ್ ರೈಲ್ವೆಯ ವ್ಯವಸ್ಥಾಪಕ ನಿರ್ದೇಶಕ ಅರವಿಂದ್ ಶ್ರೀವತ್ಸ, ಡಿಆರ್‌ಎಂ. ಆಶಾ, ಅಗರ್‌ವಾಲ್, ಪ್ರಕಾಶ್‌ಶಾಸ್ತಿç, ಕ್ರೀಸ್ಟೋಫರ್, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಭಾರತಿಶೆಟ್ಟಿ, ಶ್ರೀಮತಿ ಬಲ್ಕಿಶ್‌ಬಾನು, ಅರುಣ್‌ಕುಮಾರ್, ಧನಂಜಯಸರ್ಜಿ, ಬೋವಿ ನಿಗಮದ ಅಧ್ಯಕ್ಷ ರವಿಕುಮಾರ್, ಜಿಲ್ಲಾಧಿಕಾರಿ ಗುರುದತ್‌ಹೆಗಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಸೇರಿದಂತೆ ರೈಲ್ವೇ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

`ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು' ರೈಲ್ವೇ ಕಾಮಗಾರಿ ತ್ವರಿತಗೊಳಿಸಿ : ಕೇಂದ್ರ ಸಚಿವ ವಿ.ಸೋಮಣ್ಣ ಸೂಚನೆ Shimoga-Shikaripura-Ranebennur railway works to be expedited: Union Minister V Somanna
Share. Facebook Twitter LinkedIn WhatsApp Email

Related Posts

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM2 Mins Read

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM1 Min Read

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM1 Min Read
Recent News

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM
State News
KARNATAKA

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

By kannadanewsnow0506/07/2025 7:41 PM KARNATAKA 2 Mins Read

ಧಾರವಾಡ : ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಸಹೋದರನಿಗೆ ಬಹಳಷ್ಟು ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರ ಬೆರಳಿಂದ ಉಗುರು…

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.