ಶಿವಮೊಗ್ಗ : ಶಿಕಾರಿಪುರ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2022-23 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗಾಗಿ ಮೆಟ್ರಿಕ್ ಪೂರ್ವ ಹೊಸ ಮತ್ತು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸುವಂತಿಲ್ಲ. ಹಾಗೂ ಈ ಹಿಂದೆ ಅರ್ಜಿ ಸಲ್ಲಿಸಿ ತಿರಸ್ಕøತಗೊಂಡ ಮತ್ತು 2022-23 ನೇ ಸಾಲಿನ ನವೀನ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಕಡ್ಡಾಯವಾಗಿ NPCI ಮೂಟಕ ಆಧಾರ್ ಸೀಡಿಂಗ್ ಆಗಿರುವ ರಾಷ್ಟ್ರೀಕೃತ ಬ್ಯಾಂಕ್ ಅಕೌಂಟ್ ಅಥವಾ ಅಂಚೆ ಕಚೇರಿಯಲ್ಲಿನ IPPB Account number ಹೊಂದಿರಬೇಕು.
ಸಿಎಂ ರಾಜೀನಾಮೆ ಕೇಳುವ ಕಾಂಗ್ರೆಸ್ ಮುಖಂಡರ ಬಾಲಿಶ, ಹುಡುಗಾಟಿಕೆಯ ವರ್ತನೆ- ಎನ್.ರವಿಕುಮಾರ್ ಖಂಡನೆ
ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್ಸೈಟ್ http://ssp.karnataka.gov.in ನಲ್ಲಿ SATS (Student Achievement Tracking System) ಮೂಲಕ ಅರ್ಜಿ ಸಲ್ಲಿಸುವಂತೆ ಇಲಾಖೆಯ ಶಿಕಾರಿಪುರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಶಿಕಾರಿಪುರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ದೂ.ಸಂ: 08187-295026 ನ್ನು ಸಂಪರ್ಕಿಸುವುದು.