ಶಿವಮೊಗ್ಗ :ನಗರದಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾತ್ರಿ ಹೊತ್ತು ಬೈಕ್ ಸಂಚಾರ ನಿಷೇಧ ಹೇರಲಾಗಿದೆ. ಅಷ್ಟೇ ಅಲ್ಲದೆ ಬೈಕ್ ನಲ್ಲಿ ಯುವಕರು ಇಬ್ಬರು ಸಂಚರಿಸದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಬೈಕ್ ನಲ್ಲಿ ಹಿಂಬದಿಯಲ್ಲಿ ೪೦ ವರ್ಷಕ್ಕಿಂತ ಕಿರಿಯ ವಯಸ್ಸಿನವರನ್ನು ಕೂರಿಸಿಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮಹಿಳೆಯರಿಗೆ ಮಾತ್ರ ಹಿಂಬದಿ ಕೂರಲು ಅವಕಾಶ ನೀಡಲಾಗಿದೆ. ಒಂದು ನಿಯಮ ಉಲ್ಲಂಘನೆ ಮಾಡದ್ರೆ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಎಚ್ಚರಿಕೆ ಹೊರಡಿಸಿದ್ದಾರೆ.