ಬೆಂಗಳೂರು: ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ ನಡೆಯಬಾರದಿತ್ತು. ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲು ನಾನು ಆದೇಶ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು ಹೇಳಿದರು.
ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ -2022 ರ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಮ್ಮ ಅಧಿಕಾರಿಗಳು ಈಗಾಗಲೇ ಕ್ರಮ ತೆಗೆದುಕೊಂಡಿದ್ದಾರೆ. ಸ್ಥಳೀಯ ನಾಯಕರು ಸಹಕಾರ ಮಾಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
BIG BREAKING NEWS: ಶಿವಮೊಗ್ಗದಲ್ಲಿ ಭುಗಿಲೆದ್ದ ಸಾವರ್ಕರ್ ಪೋಸ್ಟರ್ ಗಲಾಟೆ: ಇಬ್ಬರಿಗೆ ಚಾಕು ಇರಿತ
ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚುವರಿ ಪೋರ್ಸ್ ಕಳುಹಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.