ಶಿವಮೊಗ್ಗ: ರಾಜ್ಯ ಸರ್ಕಾರದ ಸೂಚನೆಯಂತೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಇದರ ಭಾಗವಾಗಿ ತಹಶೀಲ್ದಾರ್ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಕೂಡ ಆಯೋಜಿಸಲಾಗುತ್ತಿದೆ. ಈ ಅಂಗವಾಗಿ, ನಾಳೆ ಸೊರಬ ತಾಲೂಕಿನ ಅನವಟ್ಟಿ ಹೋಬಳಿಯ, ಲಕ್ಕವಳ್ಳಿ ಗ್ರಾಮದಲ್ಲಿ ಸೊರಬ ತಹಶೀಲ್ದಾರ್ ನಡೆಸಲಿದ್ದಾರೆ.
Janmashtami Special : ಕೃಷ್ಣ ಭಕ್ತರೇ, ವಿಶ್ವದ ಅತಿ ದೊಡ್ಡ ‘ಶ್ರೀಕೃಷ್ಣ ದೇವಾಲಯ’ ಎಲ್ಲಿದೆ.? ಹೇಗಿದೆ ಗೊತ್ತಾ.?
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ತಾಲೂಕು ಆಡಳಿತದಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಸರ್ಕಾರದ ಮಹತ್ತರ ಯೋಜನೆಯಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ಹೊಸ ಪರಿಕಲ್ಪನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಕುರಿತು ಸರ್ಕಾರಿ ಸುತ್ತೋಲೆಯಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿರುತ್ತದೆ ಎಂದಿದ್ದಾರೆ.
OMG : ಈ ದೇಶದಲ್ಲಿ 10 ಮಕ್ಕಳಿಗೆ ಜನ್ಮ ನೀಡಿದ ಮಹಿಳೆಯರಿಗೆ ಲಕ್ಷ ಲಕ್ಷ ನಗದು ಹಣ : ಎಲ್ಲಿ ಗೊತ್ತಾ?
ರಾಜ್ಯ ಸರ್ಕಾರದ ಸೂಚನೆಯಂತೆ ದಿನಾಂಕ 20-08-2022ರಂದು ಬೆಳಿಗ್ಗೆ 11 ಗಂಟೆಗೆ ಅನವಟ್ಟಿ ಹೋಬಳಿಯ ಲಕ್ಕವಳ್ಳಿ ಗ್ರಾಮದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ತಹಶೀಲ್ದಾರ್ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Janmashtami Special : ಕೃಷ್ಣ ಭಕ್ತರೇ, ವಿಶ್ವದ ಅತಿ ದೊಡ್ಡ ‘ಶ್ರೀಕೃಷ್ಣ ದೇವಾಲಯ’ ಎಲ್ಲಿದೆ.? ಹೇಗಿದೆ ಗೊತ್ತಾ.?
ನಾಳೆ ನಡೆಯಲಿರುವಂತ ತಹಶೀಲ್ದಾರ್ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಜನರು ಆಗಮಿಸಿ, ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಂತೆ ಕೋರಲಾಗಿದೆ.