ಶಿವಮೊಗ್ಗ : ನಗರದ ಒಟ್ಟು 22 ಪರೀಕ್ಷಾ ಕೇಂದ್ರಗಳಲ್ಲಿ ನ.06 ರಂದು 2022 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ( Karnataka Teacher Eligibility Test – KAR TET 2022 ) ನಡೆಯಲಿದ್ದು, ಯಾವುದೇ ಅವ್ಯವಹಾರಗಳಿಗೆ, ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಲುವಾಗಿ ಸಿಆರ್ಪಿಸಿ ಕಲಂ 144 ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ.ಫಾಸಲೆವರೆಗೆ ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.
ನಿಷೇಧಿತ ವ್ಯಾಪ್ತಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಸೇರುವುದು, ಕೇಂದ್ರದ ಸುತ್ತಮುತ್ತಲಿರುವ ಟೈಪಿಂಗ್, ಜೆರಾಕ್ಸ್ ಹಾಗೂ ಫ್ಯಾಕ್ಸ್ ಅಂಗಡಿಗಳು ಈ ಅವಧಿಯಲ್ಲಿ ತೆರೆಯುವುದನ್ನು ಹಾಗೂ ಮೊಬೈಲ್ ಬಳಕೆಯನ್ನು ಪ್ರತಿಬಂಧಿಸಲಾಗಿದೆ.