ಶಿವಮೊಗ್ಗ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದಿಮದ 2022-23 ನೇ ಸಾಲಿಗೆ ಅರ್ಹ ಹಿಂದುಳಿದ ವರ್ಗಗಳ ವೀರಶೈವ ಲಿಂಗಾಯತ ಸಮುದಾಯದ ಜನರಿಂದ ವಿವಿಧ ಸಾಲ ಯೋಜನೆಯಡಿ ಆಹ್ವಾನಿಸಲಾಗಿದ್ದ ಆನ್ಲೈನ್ ಅರ್ಜಿ ( Online Application ) ಅವಧಿಯನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.
ಈ ಹಿಂದೆ ಅರ್ಜಿ ಸಲ್ಲಿಕೆ ಅವಧಿಯನ್ನು ನ.30 ರವರೆಗೆ ನಿಗದಿಪಡಿಸಲಾಗಿತ್ತು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ ನಿಯಮಿತದ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ: 080-22865522 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಭಾಗ್ಯ ನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ ದೂ.ಸಂ: 08182-229634 ವೆಬ್ಸೈಟ್ https://kvldcl.karnataka.gov.in ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
2022-23 ನೇ ಸಾಲಿಗೆ ಒಕ್ಕಲಿಗ ಸಮುದಾಯ ವಿದ್ಯಾರ್ಥಿಗಳು ವೃತ್ತಿಪರ/ತಾಂತ್ರಿಕ/ಉನ್ನತ ವ್ಯಾಸಂಗ ಕೋರ್ಸ್ಗ ವ್ಯಾಸಂಗಕ್ಕೆ ಶೈಕ್ಷಣಿಕ ಸಾಲ ನೀಡಲು ಕರೆಯಲಾಗಿದ್ದ ಆನ್ಲೈನ್ ಅರ್ಜಿ ಅವಧಿಯನ್ನು ಡಿಸೆಂಬರ್ 20 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಭಾಗ್ಯ ನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ ದೂ.ಸಂ: 08182-229634, ವೆಬ್ಸೈಟ್ https://kvcdc.karnataka.gov.in ನಿಗಮದ ದೂ.ಸಂ: ಹಾಗೂ ಇಮೇಲ್ mdkvcdc@gmail.com ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.