ಶಿವಮೊಗ್ಗ : ಸೊರಬ ತಾಲೂಕು ತೋಟಗಾರಿಕೆ ಇಲಾಖೆಯು 2022-23ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಲು ಸಹಾಯಧನಕ್ಕಾಗಿ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಂದ ಅಥವಾ ಸೊರಬ ತೋಟಗಾರಿಕೆ ಇಲಾಖೆಯಿಂದ ಜ.02 ರಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜ.25ರೊಳಗಾಗಿ ಸಲ್ಲಿಸುವಂತೆ ಸೊರಬ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಪ್ರೋತ್ಸಾಹಧನ ಯೋಜನೆಯಡಿ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿಗೆ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಎಂ, ಐಐಟಿ, ಐಐಎಸ್ಸಿ, ಐಐಐಟಿ, ಎನ್ಐಟಿ ಮುಂತಾದವುಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಪಡೆಯಲು ಆನ್ಲೈನ್ ಅಜಿ ಆಹ್ವಾನಿಸಲಾಗಿದ್ದು, ಆಸಕ್ತರು ಇಲಾಖಾ ವೆಬ್ಸೈಟ್ http://bcwd.karnataka.gov.in ರಲ್ಲಿ ಜ.30ರೊಳಗಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಹಾಗೂ ದೂ.ಸಂ.: 8050770004/ 08182-222129 ನ್ನು ಅಥವಾ ಇಮೇಲ್ – bcwdhelpline@gmail.com ನ್ನು ಸಂಪರ್ಕಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Railway Jobs: 4000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
‘ಸಹಕಾರ ಸಂಘ’ಗಳ ಸದಸ್ಯರಿಗೆ ಗುಡ್ ನ್ಯೂಸ್: ಜ.31ರವರೆಗೆ ‘ಯಶಸ್ವಿನಿ ಯೋಜನೆ’ಗೆ ನೊಂದಣಿಗೆ ಅವಧಿ ವಿಸ್ತರಣೆ