ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಗ್ರಾಮ ಸೇರಿದಂತೆ ಇತರೆ ಪ್ರದೇಶಗಳಲ್ಲಿ ಮೆಸ್ಕಾಂನಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರೆಂಟ್ ಇರೋದಿಲ್ಲ ಎಂದು ತಿಳಿಸಿದೆ.
ಈ ಕುರಿತಂತೆ ಸೊರಬ ಮೆಸ್ಕಾ ಎಇಇ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 15.09.2025 ರಂದು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಉಳವಿಯಿಂದ ವಿದ್ಯುತ್ ಸರಬರಾಜಾಗುವ ಕೆಳಕಂಡ 11 ಕೆವಿ ಫೀಡರ್‌ಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದ್ದಾರೆ.
ದಿನಾಂಕ: 15.09.2025 ರಂದು 110/11 ಕೆವಿ ಉಳವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ನಡೆಸಲು ಉದ್ದೇಶಿಸಿರುವುದರಿಂದ, 110/11 ಕೆವಿ ಉಳವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಫ್1 ಬರಗಿ ಎನ್‌ಜೆವೈ, ಎಫ್2 ಕಾನಳ್ಳಿ, ಎಫ್-3 ಉಳವಿ, ಎಫ್4 ಹೊಸಬಾಳೆ ಮತ್ತು ಎಫ್-5 ದೂಗೂರು ಫೀಡರ್‌ಗಳ ವ್ಯಾಪ್ತಿಗೊಳಪಡುವ ಎಲ್ಲಾ ಗ್ರಾಮಗಳಿಗೆ ಬೆಳಗ್ಗೆ 10:00 ರಿಂದ ಸಂಜೆ 6:00 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
CRIME NEWS: ಮಾವನ ಜೊತೆಗೆ ಅಕ್ರಮ ಸಂಬಂಧ ಹೊಂದುವಂತೆ ಅತ್ತೆಯಿಂದಲೇ ಸೊಸೆಗೆ ಕಿರುಕುಳ, FIR ದಾಖಲು