ಶಿವಮೊಗ್ಗ : ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ಎರಡು ಭಾಗಗಳಲ್ಲಿ ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಈ ಮಾರ್ಗದಲ್ಲಿ ಏ.15 ರವರೆಗೆ ವಾಹನ ಸಂಚಾರ ನಿಷೇಧಿಸಿ ಮತ್ತು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.
ಈ ಹಿಂದೆ ಏಪ್ರಿಲ್ 5 ರವರೆಗೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಕಾಮಗಾರಿ ನಡೆಯುವಾಗ ಹಲವು ಬಾರಿ ಯಂತ್ರೋಪಕರಣಗಳು ದುರಸ್ಥಿಗೆ ಒಳಪಟ್ಟ ಕಾರಣ ಸಂಚಾರ ವ್ಯವಸ್ಥೆಯನ್ನು ಏ.15 ರವರೆಗೆ ಅಂದರೆ ಹೆಚ್ಚುವರಿ ಹತ್ತು ದಿವಸುಗಳ ಕಾಲ ವಿಸ್ತರಿಸಲಾಗಿದೆ.
ಹಾಲಿ ಬಳಕೆ ಮಾಡುತ್ತಿರುವ ರಸ್ತೆಗಳು ರಾಜ್ಯ ಹೆದ್ದಾರಿ-52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಲಘು ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ-ಹಾಲಾಡಿ-ಬಸ್ರೂರು-ಕುಂದಾಪುರ ರಸ್ತೆ ಅಥವಾ ತೀರ್ಥಹಳ್ಳಿ-ಹೆಬ್ರಿ-ಉಡುಪಿ-ಕುಂದಾಪುರ ಈ ರಸ್ತೆ ಮೂಲಕ ಸಂಚರಿಸಬೇಕಾಗಿದೆ.
ರಾಜ್ಯ ಹೆದ್ದಾರಿ-52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಭಾರಿ ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ-ಕಾನಗೋಡು-ನಗರ-ಕೊಲ್ಲೂರು ಕುಂದಾಪುರ ಈ ರಸ್ತೆ ಮೂಲಕ ಸಂಚರಿಸಬೇಕಾಗಿದೆ. ಹಾಗೂ ಶಿವಮೊಗ್ಗ/ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆ ಹೋಗುವ ಲಘು/ಭಾರಿ ವಾಹನಗಳು ಪರ್ಯಾಯ ಮಾರ್ಗವಾಗಿ ಹೊಸನಗರ-ನಗರ-ಕೊಲ್ಲೂರು ರಸ್ತೆ ಮೂಲಕ ಸಂಚರಿಸಲು ಅಧಿಸೂಚನೆ ಹೊರಡಿಸಿದ್ದಾರೆ.
‘ಕರ್ನಾಟಕ ವಿಧಾನಸಭೆ ಚುನಾವಣೆ’ : ರಾಜ್ಯದಲ್ಲಿ ಈ ನಾಲ್ಕು ದಿನ ಸಿಗಲ್ಲ ‘ಮದ್ಯ’
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದ್ದು, ಮೇ 10 ರಂದು ಚುನಾವಣೆ ನಡೆಯಲಿದೆ.
ವಿಧಾನಸಭೆ ಚುನಾವಣೆ ಹಾಗೂ ಮತ ಎಣಿಕೆ ನಡೆಯುವ ಈ ಹಿನ್ನೆಲೆ ನಾಲ್ಕು ದಿನ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಮೇ 8,9,10 ಮತ್ತು 13 ರಂದು ರಾಜ್ಯದಲ್ಲಿ ಒಟ್ಟು ನಾಲ್ಕು ದಿನಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಈ ಬಗ್ಗೆ ಇಸಿಐ ಕಾರ್ಯದರ್ಶಿ ಸಂಜೀವ್ ಕುಮಾರ್ ಪ್ರಸಾದ್, ಮುಖ್ಯ ಕಾರ್ಯದರ್ಶಿ ಪತ್ರದ ಮೂಲಕ ತಿಳಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮೇ 10 ರಂದು ಮತದಾನ ನಡೆಯಲಿದೆ.ಕರ್ನಾಟಕದ 224 ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 10 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಮೇ. 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಏಪ್ರಿಲ್ 13ರದು ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗುತ್ತದೆ. ಏಪ್ರಿಲ್ 20ರಂದು ನಾಮಪತ್ರ ಸಲ್ಲಿಕೆ ಕೊನೆಯ ದಿನವಾಗಿದೆ .
ಮೇ. 24 ರಂದ 15 ನೇ ವಿಧಾನಸಭೆ ಅವಧಿ ಮುಕ್ತಾಯವಾಗಲಿದೆ. ಹೀಗಾಗಿ ಮೇ.23 ರೊಳಗೆ ಹೊಸ ಸರ್ಕಾರ ರಚನೆಯಾಗಬೇಕು. ಕರ್ನಾಟಕದಲ್ಲಿ ಒಟ್ಟು 5,21,73,579 ಮತದಾರರು ಇದ್ದಾರೆ, ಕರ್ನಾಟಕದಲ್ಲಿ ಪುರುಷ ಮತದಾರರು 2,62,42,561, ಮಹಿಳಾ ಮತದಾರರು 2,59,26,319, ತೃತೀಯ ಲಿಂಗಿ ಮತದಾರರು 4,699 ಇದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. .ಒಟ್ಟು 58,282 ಮತಗಟ್ಟೆಗಳ ಸ್ಥಾಪನೆ ಮಾಡಲಾಗುವುದು, ಒದೊಂದು ಮತಗಟ್ಟೆಗೆ 883 ಮತದಾರರು. ನಗರ ಪ್ರದೇಶಧಲ್ಲಿ 24,063 ಮತಗಟ್ಟೆಗಳ ಸ್ಥಾಪನೆ, ಗ್ರಾಮೀಣ ಪ್ರದೇಶಗಳಲ್ಲಿ 34,219 ಮತಗಟ್ಟೆಗಳ ಸ್ಥಾಪನೆ 224 ಕ್ಷೇತ್ರಗಳಲ್ಲಿ ತಲಾ ಒಂದು ಯುವ ಮತಗಟ್ಟೆಗಳ ಸ್ಥಾಪನೆ ಮಾಡಲಾಗುವುದು ಚುನಾವಣಾ ಆಯೋಗ ಮಾಹಿತಿ ನೀಡಿದೆ 80 ವರ್ಷ ಮೇಲ್ಪಟ್ಟವರಿಗೆ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ನೀಡಲಾಗಿದೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಅವಕಾಶ ನೀಡಲಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಸಾರ್ವಜನಿಕರೇ ನೀವು ‘ಚುನಾವಣಾ ಅಕ್ರಮ’ದ ಬಗ್ಗೆ ದೂರು ನೀಡಬೇಕೇ.? ಜಸ್ಟ್ ಹೀಗೆ ಮಾಡಿ, ಕ್ಷಣಾರ್ಧದಲ್ಲಿ ಕ್ರಮ