ಶಿವಮೊಗ್ಗ: ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರು ಸ್ಫೋಟ ಪ್ರಕರಣಕ್ಕೂ ಸಂಬಂಧವಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದವ ಶಂಕಿತ ಉಗ್ರ ಶಾರಿಕ್ ಆಗಿದ್ದಾನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿ ಮೂರು ಜನರನ್ನು ವಶಕ್ಕೆ ಪಡೆದು ವಿಚಾರಣೆ ಒಳಪಡಿಸಲಾಗಿದೆ. ತೀರ್ಥಹಳ್ಳಿಯಲ್ಲಿ ಪೊಲೀಸರು ಕೆಲ ಮನೆಗಳ ದಾಳಿ ನಡೆಸಿದ್ದಾರೆ. ಅನುಮಾನಾಸ್ಪದ ಪ್ರಕರಣ ಕಂಡುಬಂದಲ್ಲೆಲ್ಲ ಕಾರ್ಯಾಚರಣೆ ನಡೆಸಲಾಗಿದೆ. ನಾನು ಈ ಹಂತದಲ್ಲಿ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಮಂಗಳೂರು ಸ್ಫೋಟಕ್ಕೆ ಸಂಬಂಧಪಟ್ಟಂತೆ ಆಮೂಲಾಗ್ರ ತನಿಖೆ ನಡೆಯುತ್ತಿದೆ. ಕೇಂದ್ರ ತಂಡ ಕೂಡ ತನಿಖೆ ನಡೆಸುತ್ತಿದೆ. ಶಾರಿಕ್ ಹುಬ್ಬಳ್ಳಿ, ಮೈಸೂರಿನಲ್ಲಿ ಕಾಲ ಇದ್ದ. ಹುಬ್ಬಳ್ಳಿಯಲ್ಲಿ ಐಡಿ ಕಾರ್ಡ್ ಕಳವು ಮಾಡಿದ್ದ. ಅಲ್ಲಿ ಬೇರೆ ಹೆಸರಿನಲ್ಲಿ ವಾಸವಾಗಿದ್ದ. ಇವೆಲ್ಲವೂ ಮಾಹಿತಿ ಸಿಕ್ಕಿದೆ. ತನಿಖೆ ನಂತರ ಸಂಪೂರ್ಣ ಮಾಹಿತಿ ಲಭ್ಯವಾಗಿದೆ ಎಂದರು.