Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಜ್ಯುವೆಲ್ಲರಿ ಮಾಲೀಕನ ಕಣ್ಣಿಗೆ `ಪೆಪ್ಪರ್ ಸ್ಪ್ರೇ’ ಮಾಡಿ ದರೋಡೆಗೆ ಯತ್ನಿಸಿದ ಯುವತಿಯರು : ವಿಡಿಯೋ ವೈರಲ್ |WATCH VIDEO

ಗುರು ಋಣ ಮರೆತಿಲ್ಲ ಈ ಶಿಷ್ಯ: ನಿವೃತ್ತಿ ದಿನವೇ ನೆಚ್ಚಿನ ಶಿಕ್ಷಕನಿಗೆ `ಸ್ವಿಫ್ಟ್ ಕಾರು’ ಗಿಫ್ಟ್ ನೀಡಿದ ವಿದ್ಯಾರ್ಥಿ!

ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಧಿ ವಿಸ್ತರಣೆ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಶ್ರೀ ಮಾರಿಕಾಂಬ ದೇವಿ ಜಾತ್ರೆ ಪ್ರಯುಕ್ತ ಈ ವಾಹನ ಸಂಚಾರ ಮಾರ್ಗ/ನಿಲುಗಡೆ ಬದಲಾವಣೆ
KARNATAKA

ಶಿವಮೊಗ್ಗ: ಶ್ರೀ ಮಾರಿಕಾಂಬ ದೇವಿ ಜಾತ್ರೆ ಪ್ರಯುಕ್ತ ಈ ವಾಹನ ಸಂಚಾರ ಮಾರ್ಗ/ನಿಲುಗಡೆ ಬದಲಾವಣೆ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ : ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ದೇವರಿ ಜಾತ್ರಾ ಮಹೋತ್ಸವವು ಫೆ.24 ರಿಂದ 28 ರವರೆಗೆ ಜರುಗಲಿದ್ದು, ಈ ಸಂದರ್ಭದಲ್ಲಿ ರಾಜಬೀದಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು, ಪೂಜೆ/ಹರಕೆ/ಪ್ರಸಾದ ವಿನಿಯೋಗ, ರಾಜ್ಯ ಮಟ್ಟದ ಬಯಲು ಕುಸ್ತಿ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯುವುದರಿಂದ ಜಾತ್ರಾ ಉತ್ಸವದಲ್ಲಿ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಕಾರು, ದ್ವಿಚಕ್ರ, ಬಸ್ ಹಾಗೂ ಇತರೆ ವಾಹನಗಳಲ್ಲಿ ಬರುವುದರಿಂದ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಕಾರಣ ನಗರದ ಗಾಂಧಿಬಜಾರ್ ಮತ್ತು ಮಾರಿಕಾಂಬ ದೇವಸ್ಥಾನದ ಸುತ್ತಮುತ್ತಲಿನ ಹಾಗೂ ಹೊಳಬಸ್ ಸ್ಟಾö್ಯಪ್, ಶಂಕರಮಠ ರಸ್ತೆ, ಬಿ.ಹೆಚ್.ರಸ್ತೆ, ಕೋಟೆ ರಸ್ತೆ, ಎಸ್.ಪಿ.ಎಂ.ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಶಿವಪ್ಪ ನಾಯಕ ಸರ್ಕಲ್ ಹಾಗೂ ಸುತ್ತಮುತ್ತ ಸುಗುಮ ಸಂಚಾರದ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಮಾರ್ಗಗಳನ್ನು ಈ ಕೆಳಗಿನಂತೆ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅದೇಶ ಹೊರಡಿಸಿದ್ದಾರೆ.

ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರಸ್ತೆಗಳಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡುವುದು. ಫೆ. 24 ರಿಂದ 28ರವರೆಗೆ ಹೊಳಬಸ್ ಸ್ಟಾಪ್‌ನಿಂದ – ಬೆಕ್ಕಿನ ಕಲ್ಮಠ-ರಾಮಣ್ಣ ಶ್ರೇಷ್ಠಿ ಪಾರ್ಕ್ವರೆಗೆ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧ ಮಾಡುವುದು. ಫೆ. 24 ರಂದು ಬೆಳಗ್ಗೆ 3.00 ಗಂಟೆಯಿಂದ ರಾ.11.00 ಗಂಟೆಯವರೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಗಾಂಧಿ ಬಜಾರ್-ಶಿವಪ್ಪನಾಯಕ ಸರ್ಕಲ್‌ವರೆಗೆ ಮತ್ತು ಶಿವಪ್ಪ ನಾಯಕ ಸರ್ಕಲ್ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧ ಮಾಡುವುದು.

ಬೆಂಗಳೂರು- ಭದ್ರಾವತಿ-ಎನ್.ಆರ್.ಪುರ ಕಡೆಯಿಂದ ಬರುವ ಭಾರಿ ವಾಹನಗಳು ಮತ್ತು ಬಸ್‌ಗಳು ಎಂಆರ್‌ಎಸ್ ಸರ್ಕಲ್ ಬೈಪಾಸ್ ಮೂಲಕ ಶಿವಮೊಗ್ಗ ನಗರ ಪ್ರವೇಶ ಮಾಡುವುದು. ಚಿತ್ರದುರ್ಗ-ಹೊಳೆಹೊನ್ನೂರು ಕಡೆಯಿಂದ ಬರುವ ಭಾರಿ ವಾಹನಗಳು ಮತ್ತು ಬಸ್‌ಗಳು ವಿದ್ಯಾನಗರ-ಎಂ.ಆರ್.ಎಸ್. ಸರ್ಕಲ್ ಬೈಪಾಸ್ ಮೂಲಕ ಶಿವಮೊಗ್ಗ ನಗರ ಪ್ರವೇಶ ಮಾಡುವುದು. ಹೊನ್ನಾಳಿ-ಹೊಳಲೂರು ಕಡೆಯಿಂದ ಬರುವ ಭಾರಿ ವಾಹನಗಳು, ಸರಕು ಸಾಗಣೆ ವಾಹನಗಳು ಮತ್ತು ಬಸ್‌ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್- ಕೆಇಬಿ ಸರ್ಕಲ್- ರೈಲ್ವೆ ಸ್ಟೇಷನ್-ಉಷಾ ನರ್ಸಿಂಗ್ ಹೋಂ ಸರ್ಕಲ್- 100 ಅಡಿ ರಸ್ತೆ ಮೂಲಕ ಶಿವಮೊಗ್ಗ ನಗರ ಪ್ರವೇಶ ಮಾಡುವುದು. ಶಿಕಾರಿಪುರ ಸವಳಂಗದಿಂದ ಬರುವ ಎಲ್ಲಾ ಭಾರಿ ವಾಹನ, ಎಲ್ಲಾ ಬಸ್‌ಗಳನ್ನು ಉಷಾ ನರ್ಸಿಂಗ್ ಹೋಂ, ಲಕ್ಷ್ಮೀ ಟಾಕೀಸ್, ಪೊಲೀಸ್ ಚೌಕಿ, ಆಲ್ಕೋಳ ಮುಖಾಂತರ ಸಾಗರ ರಸ್ತೆಯಲ್ಲಿ ಹೋಗುವುದು. ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಸಂಚರಿಸುವ ಎಲ್ಲಾ ವಾಹನಗಳು ಸಂದೇಶ್ ಮೋಟಾರ್ಸ್-ಬೈಪಾಸ್ ರಸ್ತೆ ಮೂಲಕ ಸಂಚರಿಸುವುದು. ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ, ದಾವಣಗೆರೆಗೆ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರಿ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್, ಆಲ್ಕೊಳ ಸರ್ಕಲ್, ಪೊಲೀಸ್ ಚೌಕಿ, ಉಷಾ ನರ್ಸಿಂಗ್ ಹೋಂ, ಸವಳಂಗ ರಸ್ತೆ ಮೂಲಕ ಹೋಗುವುದು.

ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತೀಗಣ್ಯ ವ್ಯಕ್ತಿಗಳ ವಾಹನಗಳು, ಅಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿ ಸಂಚರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ಸೂಚಿಸಲಾಗಿದೆ.

ಇಂಡಿಯಾ AI ಸ್ಟ್ಯಾಕ್: ಬೃಹತ್ ಪ್ರಮಾಣದಲ್ಲಿ ಕೃತಕ ಬುದ್ಧಿಮತ್ತೆಯ ಸಬಲೀಕರಣ

Share. Facebook Twitter LinkedIn WhatsApp Email

Related Posts

ಗುರು ಋಣ ಮರೆತಿಲ್ಲ ಈ ಶಿಷ್ಯ: ನಿವೃತ್ತಿ ದಿನವೇ ನೆಚ್ಚಿನ ಶಿಕ್ಷಕನಿಗೆ `ಸ್ವಿಫ್ಟ್ ಕಾರು’ ಗಿಫ್ಟ್ ನೀಡಿದ ವಿದ್ಯಾರ್ಥಿ!

1 Min Read

ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಧಿ ವಿಸ್ತರಣೆ.!

2 Mins Read

ರಾಜ್ಯದ `ಆಸ್ತಿ ತೆರಿಗೆ’ ಪಾವತಿದಾರರಿಗೆ ಗುಡ್ ನ್ಯೂಸ್: ಜೂನ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ!

1 Min Read
Recent News

SHOCKING : ಜ್ಯುವೆಲ್ಲರಿ ಮಾಲೀಕನ ಕಣ್ಣಿಗೆ `ಪೆಪ್ಪರ್ ಸ್ಪ್ರೇ’ ಮಾಡಿ ದರೋಡೆಗೆ ಯತ್ನಿಸಿದ ಯುವತಿಯರು : ವಿಡಿಯೋ ವೈರಲ್ |WATCH VIDEO

ಗುರು ಋಣ ಮರೆತಿಲ್ಲ ಈ ಶಿಷ್ಯ: ನಿವೃತ್ತಿ ದಿನವೇ ನೆಚ್ಚಿನ ಶಿಕ್ಷಕನಿಗೆ `ಸ್ವಿಫ್ಟ್ ಕಾರು’ ಗಿಫ್ಟ್ ನೀಡಿದ ವಿದ್ಯಾರ್ಥಿ!

ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಧಿ ವಿಸ್ತರಣೆ.!

​’ಪರಮಾಣು ಮುಕ್ತ ಜಗತ್ತಿಗೆ ಬಲವಾದ ಗೋಡೆ’: ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಭರವಸೆ!

State News
KARNATAKA

ಗುರು ಋಣ ಮರೆತಿಲ್ಲ ಈ ಶಿಷ್ಯ: ನಿವೃತ್ತಿ ದಿನವೇ ನೆಚ್ಚಿನ ಶಿಕ್ಷಕನಿಗೆ `ಸ್ವಿಫ್ಟ್ ಕಾರು’ ಗಿಫ್ಟ್ ನೀಡಿದ ವಿದ್ಯಾರ್ಥಿ!

By kannadanewsnow57 KARNATAKA 1 Min Read

ಹಾವೇರಿ: ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ” ಎಂಬ ದಾಸವಾಣಿಯಂತೆ, ತನಗೆ ವಿದ್ಯೆ ಕಲಿಸಿ, ತಂದೆಯ ಸ್ಥಾನದಲ್ಲಿ ನಿಂತು ನೆರವಾದ…

ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಧಿ ವಿಸ್ತರಣೆ.!

ರಾಜ್ಯದ `ಆಸ್ತಿ ತೆರಿಗೆ’ ಪಾವತಿದಾರರಿಗೆ ಗುಡ್ ನ್ಯೂಸ್: ಜೂನ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ!

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.