ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಬಿದರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಗುಂಬೆ ಹೋಬಳಿಯ ಕಣಗಲು, ಸುರುಳಿಗದ್ದೆ, ಹಾಗೂ ಉಳುಮಡಿ ಗ್ರಾಮಗಳಲ್ಲಿ ಸು 45 ಕುಟುಂಬಗಳು ವಾಸಿಸುತ್ತಿದ್ದು, ಇಲ್ಲಿಗೆ ಅನೇಕ ವರ್ಷಗಳಿಂದ ಮೂಲಭೂತ ಸೌಕರ್ಯಗಳಾದ ರಸ್ತೆ, ಕರೆಂಟ್ ವ್ಯವಸ್ಥೆಗಳಿಲ್ಲದೆ ಶಾಲೆಗೆ ಹೋಗುವ ಮಕ್ಕಳಿಗೆ ತೊಂದರೆಯಾಗುತ್ತಿದ್ದು ಜೊತೆಗೆ ಇಲ್ಲಿನ 20- 30 ಯುವಕರಿಗೆ ಮದುವೆ ಗೆ ಹೆಣ್ಣು ಕೊಡದಿರಿವುದು,ಕಾಡು ಪ್ರಾಣಿಗಳ ಸಮಸ್ಯೆ ಮತ್ತು ನೆಟ್ವರ್ಕ್ ಸಮಸ್ಯೆ ಉಂಟಾಗಿದ್ದು ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದರು ಕ್ಯಾರೇ ಎನ್ನದ ಸರ್ಕಾರ ಹಾಗೂ ಆಡಳಿತಕ್ಕೆ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವುದರ ಮೂಲಕ ತಮ್ಮ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೆ ವೇಳೆ ತಲ್ಲೂರಂಗಡಿ ಕೈಮರದಿಂದ ಉಳುಮಡಿ ಹೋಗುವ ಸು 5ಕಿಮೀ ರಸ್ತೆ 8 ತಿಂಗಳ ಹಿಂದೆ ಮಾಡಿದ್ದಾದರೂ ಅಲ್ಲಲ್ಲಿ ರಸ್ತೆ ಕಿತ್ತು ಬಂದು ಕಳಪೆಯಾಗಿದೆ ಎಂದು ಗ್ರಾಮಸ್ಥರು ಆಗ್ರಸಿದ್ದಾರೆ.

ಈ ಪ್ರದೇಶ ನಕ್ಸಲ್ ಪೀಡಿತ ಪ್ರದೇಶಕ್ಕೆ ಒಳಪಟ್ಟಿದ್ದು ಮೂಲಭೂತ ಸೌಕರ್ಯಗಳು ದೊರಕುತ್ತಿಲ್ಲ ಎಂಬುದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ‘ಗುತ್ತಿಗೆ ಪದ್ದತಿ’ ರದ್ದು, ರೈತರ ‘ಬೆಳೆಸಾಲ ಮನ್ನಾ’- ರಾಹುಲ್ ಗಾಂಧಿ ಘೋಷಣೆ

Share.
Exit mobile version