ಶಿವಮೊಗ್ಗ: ಜಿಲ್ಲೆಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರ ಮೇಲಿನಿಂದ ಕೆಳಗೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ.
ಶಿವಮೊಗ್ಗ ನಗರದ ದುರ್ಗಿಗುಡಿ ರಸ್ತೆಯ ಶನಿ ಮಹಾತ್ಮ ಸ್ವಾಮಿ ದೇವಾಲಯ ಹಿಂಭಾಗದ ರಸ್ತೆಯಲ್ಲಿರುವಂತ ನಿರ್ಮಾಣ ಹಂತದ ಕಟ್ಟಡದ ಮೇಲಿನಿಂದ ಕೆಳಗೆ ಹಾರಿ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದಂತ ಅಮಿತ್(27) ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಉಡುಪಿ ಜಿಲ್ಲೆಯ ಕಾರ್ಕಳ ಮೂಲದ ಅಮಿತ್, ಶಿವಮೊಗ್ಗದ ಹೋಟೆಲ್ ಒಂದರಲ್ಲಿ ಉದ್ಯೋಗ ಮಾಡುತ್ತಿದ್ದನು. ಇಂದು ಸಂಜೆ 4.30ರ ಹಾಗೆ ನಿರ್ಮಾಣ ಹಂತದ ಕಟ್ಟಡ ಮೇಲಿನಿಂದ ಕೆಳಗೆ ಹಾರಿದ್ದನು. ಗಂಭೀರವಾಗಿ ಗಾಯಗೊಂಡ ಅಮಿತ್ ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಅಂದಹಾಗೆ ಅಮಿತ್ ಮಧ್ಯಾಹ್ನದವರೆಗೂ ಹೋಟೆಲ್ ನಲ್ಲಿ ಕೆಲಸ ಮಾಡಿದ್ದನು. ಮಧ್ಯಾಹ್ನದ ನಂತ್ರ ಹೋಟೆಲ್ ರಜೆಯಿದ್ದ ಕಾರಣ ಹೊರಗೆ ಬಂದಿದ್ದನು. ಈ ವೇಳೆ ಕಟ್ಟಡದ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವಕ ಅಮಿತ್ ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಈ ಸಂಬಂಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣ ಕೆರೊಲಿನಾದ ಬಾರ್‌ನಲ್ಲಿ ಗುಂಡಿನ ದಾಳಿ: ನಾಲ್ವರು ಸಾವು, 20 ಜನರಿಗೆ ಗಾಯ
BIG NEWS: ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರಿಗೆ ‘ಸಚಿವ ಸ್ಥಾನ’ ಫಿಕ್ಸ್!? | Karnataka Cabinet Expansion