ಶಿವಮೊಗ್ಗ : ರಾಜ್ಯದಲ್ಲಿ ಮಳೆ ಅವಘಡಕ್ಕೆ ಮತ್ತೊಂದು ಬಲಿಯಾಗಿದ್ದು, ಮರ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೀನಮನೆಕೊಪ್ಪ ಗ್ರಾಮದ ಬಳಿ ರಾತ್ರಿ ಮರ ಬಿದ್ದು ರಾಮಪ್ಪ (೨೩) ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಪಾಯಕಾರಿ ಮರಗಳ ತೆರವು ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ರೂ ಮರಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ತೆರವು ಮಾಡಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.